ಮಾರ್ಚ್ ಅಂತ್ಯದೊಳಗೆ ಬಿಎಂಟಿಸಿ 'ನಿಮ್ ಬಸ್' ಆ್ಯಪ್ ಬಿಡುಗಡೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಹು ನಿರೀಕ್ಷಿತ ನಿಮ್ ಬಸ್ ಆ್ಯಪ್ ಮಾರ್ಚ್ ಅಂತ್ಯದೊಳಗೆ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಹು ನಿರೀಕ್ಷಿತ ನಿಮ್ ಬಸ್ ಆ್ಯಪ್ ಮಾರ್ಚ್ ಅಂತ್ಯದೊಳಗೆ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಆರಂಭದಲ್ಲಿ ಈ ಆ್ಯಪ್ ಡಿಸೆಂಬರ್ 23 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ನಂತರ ಈ ದಿನಾಂಕವನ್ನು ಮುಂದೂಡಲಾಗಿತ್ತು. ನಂತರ ಗಣರಾಜ್ಯೋತ್ಸವ ದಿನದಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಆ ದಿನವೂ ಆ್ಯಪ್'ನ್ನು ಬಿಡುಗಡೆ ಮಾಡಲಾಗಿಲ್ಲ. ಸೀಮಿತ ಜನರಿಗಷ್ಟೇ ಆ್ಯಪ್ ಬಳಕೆಗೆ ಬಿಎಂಟಿಸಿ ಅವಕಾಶ ನೀಡಿತ್ತು. ಈ ವೇಳೆ ಆ್ಯಪ್ ನಲ್ಲಿ ಕೆಲ ದೋಷಗಳು ಕಂಡು ಬಂದಿದ್ದು, ಇದನ್ನು ಸರಿಪಡಿಸಿ, ಆ್ಯಪ್'ಗೆ ಹೊಸ ಹೆಸರು ನೀಡಲು ಬಿಎಂಟಿಸಿ ಮುಂದಾಗಿತ್ತು. ಇದೀಗ ಹೊಸ ಹೆಸರಿನೊಂದಿಗೆ ಆ್ಯಪ್ ಬಿಡುಗಡೆ ಮಾಡಲು ಬಿಎಂಟಿಸಿ ಮುಂದಾಗಿದೆ.
ಮಾರ್ಚ್ ಅಂತ್ಯದೊಳಗೆ ಆ್ಯಪ್ ನಲ್ಲಿರುವ ಲೋಪದೋಷಗಳನ್ನು ಕಂಡು ಹಿಡಿದು ಅದನ್ನು ಸರಿಪಡಿಸಲಾಗುತ್ತದೆ ಎಂದು ಬಿಎಂಟಿಸಿ ಎಂಡಿ ಸತ್ಯವತಿ ಅವರು ಹೇಳಿದ್ದಾರೆ.
ಪ್ರಯಾಣಕ್ಕೆ ಸಂಬಂಧಿಸಿದಂತೆ ಆ್ಯಪ್ ನಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿವೆ. ಅಂದಾಜು ಸಮಯ, ಮಾರ್ಗಗಳ ವಿವರಗಳ ಕುರಿತು ಆ್ಯಪ್ ನಲ್ಲಿ ಕೆಲಸಗಳು ನಡೆಯಬೇಕಿದೆ. ಈ ಕುರಿತು ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
IOS ಮತ್ತು Andriod ಬಳಕೆದಾರರನ್ನು ಒಳಗೊಂಡ 10 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ನಿರೀಕ್ಷಿಸಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡದಲ್ಲಿ ಆ್ಯಪ್ ಲಭ್ಯವಾಗಲಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್ಗಳನ್ನು ನೈಜ ಸಮಯದಲ್ಲಿ ಟ್ರ್ಯಾಕ್ ಮಾಡಲು ಆ್ಯಪ್ ಅನುವು ಮಾಡಿಕೊಡಲಿದೆ. ಮಾರ್ಗಗಳ ವಿವರಗಳು ಮತ್ತು ಟಿಕೆಟ್ ದರಗಳನ್ನು ಆ್ಯಪ್ ಒದಗಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


