ನವಿಲು ಗರಿ ಹಾರ ತಂದ ಸಂಕಷ್ಟ: ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯಗೆ ಬಂಧನ ಭೀತಿ
ಚುನಾವಣಾ ಪ್ರಚಾರದ ವೇಳೆ ನವಿಲುಗರಿಗಳ ಹಾರ ಹಾಕಿಕೊಂಡಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಾಗಿದೆ.

ಮೈಸೂರು: ಚುನಾವಣಾ ಪ್ರಚಾರದ ವೇಳೆ ನವಿಲುಗರಿಗಳ ಹಾರ ಹಾಕಿಕೊಂಡಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಾಗಿದೆ.
ಕ್ಷೇತ್ರದಾದ್ಯಂತ ಪಾದಯಾತ್ರೆ ಮಾಡುತ್ತಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಪಾಂಡವಪುರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅವರ ಅಭಿಮಾನಿಯೊಬ್ಬರು ಬೃಹತ್ ನವಿಲುಗರಿಯ ಹಾರವನ್ನು ಹಾಕಿ, ಸನ್ಮಾನಿಸಿದರು. ಈ ಹಾರವೇ ಇದೀಗ ಪುಟ್ಟಣ್ಣಯ್ಯ ಅವರಿಗೆ ಸಂಕಷ್ಟವನ್ನು ಎದುರು ಮಾಡಿದೆ.
ದರ್ಶನ್ ಅವರು ನವಿಲುಗರಿಗಳ ಹಾರ ಧರಿಸಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವನ್ಯಜೀವಿ ಕಾರ್ಯಕರ್ತರು, ಪುಟ್ಟಣ್ಣಯ್ಯ ಹಾಗೂ ಅವರ ಬೆಂಬಲಿಕರ ವಿರುದ್ಧ ದೂರು ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಅರಣ್ಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


