ರಾಜ್ಯ

ವಿಧಾನಸಭಾ ಚುನಾವಣೆ: ದಕ್ಷತೆಯಿಂದ ಕೆಲಸ ಮಾಡಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಿರುವ ತಂಡಗಳು ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಮಂಗಳವಾರ ಸೂಚನೆ ನೀಡಿದರು.

ವಿಧಾನಸಭಾ ಚುನಾವಣೆ: ದಕ್ಷತೆಯಿಂದ ಕೆಲಸ ಮಾಡಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
Published On :

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಿರುವ ತಂಡಗಳು ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಮಂಗಳವಾರ ಸೂಚನೆ ನೀಡಿದರು.

ಈಗಾಗಲೇ ಗಡಿಪ್ರದೇಶಗಳ ಚೆಕ್ ಪೋಸ್ಟ್‌ಗಳಲ್ಲಿ ನಿಯೋಜನೆಗೊಂಡಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ಇಡಬೇಕು. ಪ್ರತಿ ಪೊಲೀಸ್ ಠಾಣೆಯಲ್ಲಿ ದಿನದ 24 ಗಂಟೆಯೂ ಒಂದು ತಂಡ ಕಾರ್ಯನಿರ್ವಹಿಸಬೇಕು. ಗೋದಾಮುಗಳು, ಕಾರ್ಖಾನೆಗಳು, ಕಟ್ಟಡಗಳು ಮತ್ತು ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ, ಸಂಬಂಧಿಸಿದ ಇಲಾಖೆಗಳ ತಂಡಗಳು ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳು, ಚೆಕ್ ಪೋಸ್ಟ್ ಮತ್ತು ಇತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.