ಹಣದ ಆಮಿಷಕ್ಕೆ ಮರುಳಾಗದಿರಿ: ಮತದಾರರಿಗೆ ಸಚಿವ ವಿ.ಸೋಮಣ್ಣ ಮನವಿ
ಹಣದ ಆಮಿಷಕ್ಕೆ ಮರುಳಾಗದಿರಿ ಎಂದು ಮತದಾರರಿಗೆ ವಸತಿ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಹಣದ ಆಮಿಷಕ್ಕೆ ಮರುಳಾಗದಿರಿ ಎಂದು ಮತದಾರರಿಗೆ ವಸತಿ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಮೈದಾನದಲ್ಲಿ, ಸ್ವಾವಲಂಬಿ ಜೀವನ ಸಾಗಿಸಲು 433 ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಸಚಿವರು ಮಾತನಾಡಿದರು.
ರಾತ್ರಿ ವೇಳೆಯಲ್ಲಿ ಹಣ ಹಂಚಿ ಆಮಿಷ ಒಡ್ಡುವವರಿಗೆ ಜನರು ಮರುಳಾಗಬಾರದು. ಯಾವ ಯಾವ ಕಾಮಗಾರಿಗಳು ನಡೆದಿದೆ ಎಂಬುದನ್ನು ನಾಗರೀಕರೇ ಮೌಲ್ಯಮಾಪನ ಮಾಡಬೇಕು ಎಂದು ಹೇಳಿದರು.
ಆಮಿಷಕ್ಕೊಳಗಾಗಿ ಪಡೆದ ಹಣ ಒಂದು-ಎರಡು ದಿನಗಳು ಮಾತ್ರ ಇರುತ್ತದೆ. ಆದರೆ, ಸಮರ್ಥ ಅಭ್ಯರ್ಥಿಗೆ ನೀಡುವ ಮತವು ಸಾರ್ವಕಾಲಿಕ ಸೇವೆಯನ್ನು ನೀಡುತ್ತದೆ ಎಂದು ತಿಳಿಸಿದರು. ಇದೇ ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೆ ಇರುವವರು ಆದಷ್ಟು ಬೇಗ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು.
ಹೊಲಿಗೆ ಯಂತ್ರ ವಿತರಣೆಯು ಮಹಿಳೆಯರಲ್ಲಿ ಸ್ವಾವಲಂಬನೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಕಲ್ಯಾಣ ಕಾರ್ಯಕ್ರಮದಡಿ ತರಬೇತಿ ಪಡೆದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


