ಬೆಂಗಳೂರು: ಮಾಜಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!
ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 23 ವರ್ಷದ ತನ್ನ ಮಾಜಿ ಪ್ರೇಮಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಬೆಂಗಳೂರು: ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 23 ವರ್ಷದ ತನ್ನ ಮಾಜಿ ಪ್ರೇಮಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಆರೋಪಿ ಮನೋಜ್ ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾನೆ. ಆರೋಪಿಯನ್ನು ಮನೋಜ್ ಮತ್ತು ಸಂತ್ರಸ್ತೆ ಫೇಸ್‌ಬುಕ್ ಸ್ನೇಹಿತರಾಗಿದ್ದು, ನಂತರ ಪ್ರೀತಿಸುತ್ತಿದ್ದರು. ಸಂತ್ರಸ್ತೆಯ ಪೋಷಕರು ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯಿಸಿದ್ದಾರೆ.
ಈ ವಿಷಯ ತಿಳಿದ ಆರೋಪಿ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕೆಯ ನಿವಾಸಕ್ಕೆ ತೆರಳಿ ಆಕೆಯೊಂದಿಗೆ ಜಗಳವಾಡಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ ತಲೆದಿಂಬಿನಿಂದ ಉಸಿರಿಗ್ಟಿಸಿ ಕೊಲೆಗೈದಿದ್ದಾನೆ ಎನ್ನಲಾಗಿದೆ. ಆಕೆಯ ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢ ಪಟ್ಟಿದೆ.
ಮನೋಜ್ ರಸ್ತೆ ನಿರ್ಮಾಣ ಕಂಪನಿಯಲ್ಲಿ ಬರಹಗಾರರಾಗಿ ಕೆಲಸ ಮಾಡುತ್ತಾನೆ. ಸಂತ್ರಸ್ತ ಯುವತಿ ವಿಲ್ಸನ್ ಗಾರ್ಡನ್ ನಿವಾಸಿ. ಮಂಗಳವಾರ ರಾತ್ರಿ 10 ರಿಂದ 12ರ ಸಮಯದಲ್ಲಿ ಕೃತ್ಯ ನಡೆದಿದೆ, ಮನೆಗೆ ಮರಳಿದ ಬಳಿಕ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಕೊಲೆಯ ಬಗ್ಗೆ ತಿಳಿಯದ ಸಂತ್ರಸ್ತೆಯ ಮನೆಯವರು ಆಕೆ ಮಲಗಿದ್ದಾಳೆ ಎಂದು ಭಾವಿಸಿದ್ದರು, ಆದರೆ ನಂತರ ಆಕೆ ಸತ್ತಿರುವುದು ತಿಳಿದು ಬಂದಿದೆ. ದೂರು ದಾಖಲಾದ ನಂತರ, ಸ್ಥಳೀಯ ಗುಪ್ತಚರ ಆಧಾರವರದಿಗಳ ಆಧಾರದ ಮೇಲೆ ನಾವು ಆರೋಪಿಗಳ ವಿವರಗಳನ್ನು ಸಂಗ್ರಹಿಸಿದ್ದೇವೆ. ನಾವು ಅವರ ಮನೆಗೆ ಹೋದಾಗ, ಆತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನಮಗೆ ತಿಳಿಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆರೋಪಿ ಮನೋಜ್ ನನ್ನು ಇನ್ನೂ ಬಂಧಿಸಿಲ್ಲ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆ ವರದಿಯು ಅತ್ಯಾಚಾರವನ್ನು ದೃಢಪಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆ, ತನ್ನ ವಿದ್ಯಾಭ್ಯಾಸದ ನಂತರ, ಸ್ವಲ್ಪ ಕಾಲ ಕೆಲಸ ಮಾಡುತ್ತಿದ್ದಳು, ಆದರೆ ಸದ್ಯ ಮನೆಯಲ್ಲಿಯೇ ಇದ್ದಳು. ಮನೋಜ್ ವಿರುದ್ಧ ಅತ್ಯಾಚಾರ (ಐಪಿಸಿ 376) ಮತ್ತು ಕೊಲೆ (ಐಪಿಸಿ 302) ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


