ರಾಜ್ಯ

ವಿಜಯಪುರ: ಕಾರು ಅಪಘಾತದಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿಗೆ ಗಾಯ

ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ವಿಜಯಪುರ ನಗರದ ಹೊರವಲಯದ ಜುಮನಾಳ ಗ್ರಾಮದ ಸಮೀಪ ಅಪಘಾತಕ್ಕಿಡಾಗಿದ್ದು,. ಸಚಿವೆ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ...

ವಿಜಯಪುರ: ಕಾರು ಅಪಘಾತದಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿಗೆ ಗಾಯ
ಅಪಘಾಕ್ಕೀಡಾದ ಕಾರು
Published On :

ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ವಿಜಯಪುರ ನಗರದ ಹೊರವಲಯದ ಜುಮನಾಳ ಗ್ರಾಮದ ಸಮೀಪ ಅಪಘಾತಕ್ಕಿಡಾಗಿದ್ದು,. ಸಚಿವೆ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಅಪಘಾತ ಸಂಭವಿಸಿದ್ದು, ಕೇಂದ್ರ ಸಚಿವರ ಇನ್ನೋವಾ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಚಿವರು ಮತ್ತು ಅವರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಟ್ರಕ್ ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಭಾರತೀಯ ಜನತಾ ಪಕ್ಷ(ಬಿಜೆಪಿ) ಇಂದು ವಿಜಯಪುರದಲ್ಲಿ ಆಯೋಜಿಸಿದ್ದ ಮಹಿಳಾ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಸಾಧ್ವಿ ನಿರಂಜನಾ‌ ಜ್ಯೋತಿ ಅವರು ಆಗಮಿಸಿದ್ದರು.

ಅಪಘಾತದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜ್ಯೋತಿ ಅವರು, "ದೇವರ ದಯೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಾರು ಚಾಲಕನ ಎಚ್ಚರಿಕೆಯು ಟ್ರಕ್ ಅಡಿಯಲ್ಲಿ ಸಿಲುಕದಂತೆ ನಮ್ಮನ್ನು ರಕ್ಷಿಸಿದೆ. ನಮಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.