ರಾಜ್ಯ

ಶಿವಮೊಗ್ಗ: ತಡರಾತ್ರಿ ಮಹಿಳೆಯರ ಪಾರ್ಟಿ ತಡೆದ ಭಜರಂಗದಳ ಕಾರ್ಯಕರ್ತರು

ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ.

ಶಿವಮೊಗ್ಗ: ತಡರಾತ್ರಿ ಮಹಿಳೆಯರ ಪಾರ್ಟಿ ತಡೆದ ಭಜರಂಗದಳ ಕಾರ್ಯಕರ್ತರು
ಬಜರಂಗದಳ ಆಕ್ಷೇಪ ವ್ಯಕ್ತಪಡಿಸಿದ ನಂತರ ಹೋಟೆಲ್‌ನಿಂದ ಹೊರ ಬಂದ ಮಹಿಳೆಯರು
Published On :

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ.

ಕುವೆಂಪು ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು.

ಬಜರಂಗದಳದ ಕಾರ್ಯಕರ್ತರು ಪಾರ್ಟಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಸೇರಿದಂತೆ ಹಲವರು ಹೋಟೆಲ್‌ನಿಂದ ಹೊರಗೆ ಬರುತ್ತಿರುವುದು ಕಂಡುಬಂದಿತು. 
ತಡರಾತ್ರಿ ಪಾರ್ಟಿ ಆಯೋಜಿಸಲಾಗಿದೆ ಎಂದು ಬಜರಂಗದಳದ ಮುಖಂಡ ರಾಜೇಶ್ ಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.

''ಮಹಿಳೆಯರ ಲೇಟ್ ನೈಟ್ ಪಾರ್ಟಿ ನಡೆಯಲಿರುವ ಬಗ್ಗೆ ವಾರದ ಹಿಂದೆಯೇ ಪೊಲೀಸರ ಗಮನಕ್ಕೆ ತಂದಿದ್ದೆವು. ಮಲೆನಾಡು ಭಾಗದಲ್ಲಿ ಇಂತಹ ಪಾರ್ಟಿಗಳನ್ನು ಆಯೋಜಿಸಬಾರದು. ಆದರೆ, ಆಕ್ಷೇಪದ ನಡುವೆಯೂ ಪಾರ್ಟಿ ಆಯೋಜಿಸಲಾಗಿತ್ತು. ನಾವು ಪೊಲೀಸರೊಂದಿಗೆ ಹೋಗಿ ಪಾರ್ಟಿಯನ್ನು ನಿಲ್ಲಿಸಿದೆವು. ಅಲ್ಲಿ ಪಬ್‌ನಂತಹ ವಾತಾವರಣ ಇತ್ತು ” ಎಂದು ರಾಜೇಶ್ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.