ಲಂಚ ಸ್ವೀಕರಿಸಿದ್ದ ಕಂದಾಯ ನಿರೀಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ, ರೂ 4 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನೊಬ್ಬನಿಗೆ ವಿಶೇಷ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, 4 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.

ಬೆಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನೊಬ್ಬನಿಗೆ ವಿಶೇಷ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, 4 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.
ಕೆಂಗೇರಿ ಹೋಬಳಿಯ ಕಂದಾಯ ನಿರೀಕ್ಷಕ ಸುರೇಶ್ ಜಿ.ಸಿ. (51) ದೋಷಿ ಎಂದು ತೀರ್ಮಾನಿಸಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ.4 ಲಕ್ಷ ದಂಡ ವಿಧಿಸಿದೆ.
ಮ್ಯುಟೇಷನ್ ಬದಲಾವಣೆ ಮಾಡಲು ಕೆಲ ವ್ಯಕ್ತಿಗಳಿಗೆ ಸುರೇಶ್ ರೂ. 5 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಂತರ ಚೌಕಾಸಿ ಮಾಡಿದಾಗ ರೂ.4 ಲಕ್ಷಗೆ ಒಪ್ಪಿಕೊಂಡಿದ್ದರು. ಇದರಂತೆ ರೂ.2 ಲಕ್ಷವನ್ನು ಮುಂಗಡ ಪಡೆದಿದ್ದರು. ರೂ.2 ಲಕ್ಷ ನೀಡಿದ್ದ ವ್ಯಕ್ತಿಗಳು ಉಳಿದ ಹಣ ನೀಡುವುದಕ್ಕೂ ಮುನ್ನ ಎಸಿಬಿಗೆ ದೂರು ನೀಡಿದ್ದಾರೆ. ಇದರಂತೆ 2016ರ ಸೆಪ್ಟೆಂಬರ್ 2ರಂದು ಲಂಚ ಪಡೆಯುತ್ತಿದ್ದಾಗ ಕಂದಾಯ ನಿರೀಕ್ಷಕನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.
ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಎಸಿಬಿ ಅಧಿಕಾರಿಗಳು, ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ಮಂಗಳವಾರ ವಿಚಾರಣೆ ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್ ಕೆ ಅವರು, ಸುರೇಶ್ ವಿರುದ್ಧದ ಆರೋಪಗಳು ಸಾಬೀತಾಗಿವೆ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಪಡೆದಿರುವುದು ದೃಢಪಟ್ಟಿದೆ’ ಎಂದು ಪ್ರಕಟಿಸಿದರು. ಅಲ್ಲದೆ, ಸುರೇಶ್ ಅವರಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ರೂ.4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದರು.
ದಂಡ ಪಾವತಿಗೆ ತಪ್ಪಿದಲ್ಲಿ ನಾಲ್ಕು ತಿಂಗಳ ಸಾಧಾರ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


