ರಾಜ್ಯ

ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಸಾಂದರ್ಭಿಕ ಚಿತ್ರ
Published On :

ಕಲಬುರಗಿ: ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಮೆಹಬೂಬ್ ಪಾಷಾ ಎಂದು ಗುರುತಿಸಲಾಗಿದೆ. ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್) ಈ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ 11 ಗಂಟೆಗೆ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ವಾರ್ಡ್‌ಗೆ ನುಗ್ಗಿದ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಆತನನ್ನು ಹಿಡಿದು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಸಂಸ್ತಸ್ತೆ ಕಳೆದ ಏಳು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರಹ್ಮಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.