ಯುವಕರು ಸಂಶೋಧನೆಯತ್ತ ಗಮನಹರಿಸಬೇಕು: ಸಿಎಂ ಬೊಮ್ಮಾಯಿ
ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ವಿಜ್ಞಾನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳವೆ. ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು, ಸಂಶೋಧಕರು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಗೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದರು.

ಬೆಂಗಳೂರು: ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ವಿಜ್ಞಾನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳವೆ. ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು, ಸಂಶೋಧಕರು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಗೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದರು.
ಶನಿವಾರ ನಗರದ ಸಂಜಯನಗರದ ಪಶುವೈದ್ಯ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಸೌಲಭ್ಯಗಳುಳ್ಳ ವಿಜ್ಞಾನ ಗ್ಯಾಲರಿ ಬೆಂಗಳೂರು ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಇರುವವರೆಗೆ ಮಾಡಿರುವ ಸಾಧನೆಗಳಿಗೆ ಬಳಸಿರುವುದು ತನ್ನ ಮೆದುಳಿನ ಶೇ.25ರಷ್ಟು ಶಕ್ತಿ, ಸಾಮರ್ಥ್ಯ ಮಾತ್ರ. ಅಂದರೆ, ಮನುಷ್ಯನ ಮಿದುಳು ಇನ್ನೂ ಶೇ.75ರಷ್ಟು ವಿಸ್ತೃತವಾಗಿದೆ. ಮೆದುಳಿನ ಸಾಮರ್ಥ್ಯವನ್ನು ಶೇ.100ರಷ್ಟು ಬಳಸಿಕೊಂಡು ಸಂಸೋಧನೆಗಳನ್ನು ನಡೆಸಿದರೆ ಇನ್ನ ಏನೆಲ್ಲಾ ಸೃಷ್ಟಿಸಬಹುದು ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ ಎಂದರು ಹೇಳಿದರು.
ನಮ್ಮ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಲು ಹಾಗೂ ಸಂಶೋಧನೆಗಳಲ್ಲಿ ಆಸಕ್ತಿ ಇರುವವರು ವಿಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಹೊಸ ಸಂಶೋಧನೆಗೆ ಮುಂದಾಗಬೇಕು. ಇಂದು ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಜ್ಞಾನದ ಪಾರಮ್ಯವಿದೆ. ಆದರೆ, ಮೂಲ ವಿಜ್ಞಾನ, ಹಿಂದಕ್ಕೆ ಸರಿಯುತ್ತಿದೆ. ವಾಸ್ತವವಾಗಿ ಮೂಲ ವಿಜ್ಞಾನ ಮತ್ತು ಸಂಶೋಧನೆಗಳು ನಮ್ಮ ಬದುಕಿನ ಮತ್ತು ಚಿಂತನೆಯ ಭಾಗವಾಗಬೇಕು. ವಿಜ್ಞಾನದ ಲಾಭವು ಶ್ರೀ ಸಾಮಾನ್ಯವನ್ನು ತಲುಪಬೇಕು ಎಂದು ತಿಳಿಸಿದರು.
ವಿಜ್ಞಾನ ಗ್ಯಾಲರಿ, ಸಾರ್ವಜನಿಕರಿಗೆ ವಿಜ್ಞಾನ ಮತ್ತು ಸಂಸ್ಕೃತಿಯ ಬಗ್ಗೆ ಜ್ಞಾನದ ಮತ್ತೊಂದು ಮೂಲವಾಗಲಿದೆ. ಸರ್ಕಾರವು ಸಾರ್ವಜನಿಕರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಮತ್ತು ಹೊಸದಾಗಿ ಉದ್ಘಾಟನೆಗೊಂಡ ಗ್ಯಾಲರಿ ಈ ಉದ್ದೇಶಕ್ಕೆ ಉತ್ತೇಜನ ನೀಡಲಿದೆ ಎಂದರು.
ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಮಾತನಾಡಿ, ಬೆಂಗಳೂರು ನಗರವು ದೇಶದ ವಿಜ್ಞಾನ ಮತ್ತು ತಂತ್ರಜ್ಞಾನಗಳ ರಾಜಧಾನಿಯಾಗಿದೆ. ಇಂತಹ ನಗರದಲ್ಲಿ ಸರ್ಕಾರ ವಿಜ್ಞಾನ ಗ್ಯಾಲರಿ ಸ್ಥಾಪಿಸಿರುವುದು ಈ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಗಳಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಗ್ಯಾಲರಿಯನ್ನು ಲಾಭೋದ್ದೇಶವಿಲ್ಲದ ಸಾರ್ವಜನಿಕ ಸಂಸ್ಥೆಯಾಗಿ ಸ್ಥಾಪಿಸಲಾಗಿದೆ, ಅಲ್ಲಿ ಯುವಕರು ವಿಜ್ಞಾನದ ಸಂಶೋಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು. ಗ್ಯಾಲರಿಯು ಮೂರು ಶೈಕ್ಷಣಿಕ ಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc), ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ (NCBS), ಮತ್ತು ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಆ್ಯಂಡ್ ಟೆಕ್ನಾಲಜಿಗಳೊಂದಿಗೆ ಸಹಭಾಗಿತ್ವ ಹೊಂದಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


