ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಮಳೆ ನೀರು ಅವಾಂತರ: ಕಾರಣ ತಿಳಿಸಿದ ಕೇಂದ್ರ ಸಚಿವಾಲಯ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ವತಿಯಿಂದ ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ರಾಮನಗರದ ಬಳಿ ಇತ್ತೀಚೆಗೆ ಸುರಿದ ಮಳೆಗೆ ನೀರು ನಿಂತು ಹೊಳೆಯಂತಾಗಿತ್ತು. ಭಾರೀ ಅವಾಂತರ ಸೃಷ್ಟಿಯಾಗಿತ್ತು.

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ವತಿಯಿಂದ ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ರಾಮನಗರದ ಬಳಿ ಇತ್ತೀಚೆಗೆ ಸುರಿದ ಮಳೆಗೆ ನೀರು ನಿಂತು ಹೊಳೆಯಂತಾಗಿತ್ತು. ಭಾರೀ ಅವಾಂತರ ಸೃಷ್ಟಿಯಾಗಿತ್ತು. ಈ ಬಗ್ಗೆ ವಿರೋಧ ಪಕ್ಷಗಳಿಂದ, ಸಾರ್ವಜನಿಕರಿಂದ ತೀವ್ರ ಟೀಕೆ ಕೂಡ ವ್ಯಕ್ತವಾಗಿತ್ತು. ಇದಕ್ಕೆ ಕೇಂದ್ರ ಹೆದ್ದಾರಿ ಸಚಿವಾಲಯ ಸ್ಪಷ್ಟೀಕರಣ ನೀಡಿದೆ.
`ರಾಮನಗರ ಸಮೀಪದ ಗ್ರಾಮಸ್ಥರು ಚರಂಡಿಯ ಮಾರ್ಗವನ್ನು ತಡೆಹಿಡಿದಿದ್ದರು. ಆದ್ದರಿಂದ ರಸ್ತೆಯಲ್ಲಿ ನೀರು ನಿಲ್ಲುವಂತಾಯಿತು ಎಂದು ಎಂದು ಸರ್ಕಾರ ಹೇಳಿಕೊಂಡಿದೆ. ಸಚಿವಾಲಯವು ಹೇಳಿಕೆಯಲ್ಲಿ, “ಮಾದಾಪುರ ಮತ್ತು ಸುತ್ತಮುತ್ತಲ ಇತರ ಗ್ರಾಮಸ್ಥರು ಅಡ್ಡದಾರಿ ನಿರ್ಮಿಸಿಕೊಂಡು ಆ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದರು. ಅದಕ್ಕಾಗಿ 3 ಮೀಟರ್ ಅಗಲಕ್ಕೆ ಚರಂಡಿಯನ್ನು ಮಣ್ಣಿನಿಂದ ಮುಚ್ಚಿದ್ದರು. ಅವರು ನಿರ್ಮಿಸಿದ್ದ ಅಡ್ಡದಾರಿಯನ್ನು ಮಾರ್ಚ್ 18 ರಂದು ತೆಗೆದುಹಾಕಿದ್ದು, ಚರಂಡಿಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ಶನಿವಾರ ಬೆಳಗ್ಗೆ ಬೆಂಗಳೂರಿನ ಹೊರವಲಯದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಮನಗರದ ರಸ್ತೆಯಲ್ಲಿ ನೀರು ತುಂಬಿತ್ತು. ವಾಹನಗಳು ಎಕ್ಸ್‌ಪ್ರೆಸ್‌ವೇಯಲ್ಲಿ ಮೊಣಕಾಲು ಆಳದ ನೀರಿನ ಮೂಲಕ ಚಲಿಸುತ್ತಿರುವುದು ಕಂಡುಬಂದಿದ್ದು, ಈ 119 ಕಿಲೋಮೀಟರ್ ಎಕ್ಸ್‌ಪ್ರೆಸ್‌ವೇ ಗುಣಮಟ್ಟದ ಬಗ್ಗೆ ಪ್ರಶ್ನೆಯನ್ನು ಎತ್ತಿದೆ. ಚುನಾವಣೆಗೆ ಮುನ್ನ ಬಿಜೆಪಿ ತರಾತುರಿಯಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಮಾರ್ಚ್ 12 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯದಲ್ಲಿ ಸಾರ್ವಜನಿಕ ಸಭೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದರು. ಅದನ್ನು ಕರ್ನಾಟಕದ ಜನರಿಗೆ 'ಉಡುಗೊರೆ' ಎಂದು ಕರೆದರು. ಎಕ್ಸ್‌ಪ್ರೆಸ್‌ವೇ ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು 75 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಎರಡೂ ನಗರಗಳ ನಡುವೆ ಪ್ರಯಾಣಿಸಲು ಇದು ಸರಿಸುಮಾರು ಮೂರು ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಈ ಯೋಜನೆಯು 11 ಮೇಲ್ಸೇತುವೆಗಳು, 64 ಅಂಡರ್‌ಪಾಸ್‌ಗಳು, ಐದು ಬೈಪಾಸ್‌ಗಳು, 42 ಸಣ್ಣ ಸೇತುವೆಗಳನ್ನು ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


