ಭಾರತದಲ್ಲಿ ಮತ್ತೆ ಏರಿಕೆಯ ಹಾದಿಯಲ್ಲಿ ಮಹಾಮಾರಿ ಕೊರೋನಾ: ಆರ್‌ಟಿ-ಪಿಸಿಆರ್ ಪರೀಕ್ಷೆ ಹೆಚ್ಚಿಸಲು ಬಿಬಿಎಂಪಿ ಮುಂದು
ದಿನಕಳೆದಂತೆ ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು: ದಿನಕಳೆದಂತೆ ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಪ್ರಸ್ತುತ 4,000 ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಇದನ್ನು ದಿನಕ್ಕೆ 6,000 ಪರೀಕ್ಷೆಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಹೆಚ್ಚಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಗರದಲ್ಲಿ ಕೊರೋನಾ ಪಾಸಿಟಿವ ದರ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ ಎಂದು ಹೇಳಿದರು.
ಬಿಬಿಎಂಪಿ ಆರೋಗ್ಯ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ 413 ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 343 ಮಂದಿ ಚೇತರಿಸಿಕೊಂಡಿದ್ದಾರೆ. ಒಂದು ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿ ವಯಸ್ಸಾಗಿದ್ದು, ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ ಪತ್ತೆಯಾಗಿರುವ 413 ಸೋಂಕು ಪ್ರಕರಣಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 394 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


