ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು
ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.
ಮೃತ ಐಶ್ವರ್ಯಾ ಎಂಬ ಯುವತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ ಮೇಲೆ ಹರಿದು ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಯುವತಿಯ ತಲೆಗೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯುವತಿಯು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಿವಾಸಿಯಾಗಿದ್ದು,ಈ ಅಪಘಾತದ ವಿಚಾರವಾಗಿ ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಬಂದು ಕಾರು ಚಾಲಕನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


