ಬೆಂಗಳೂರು: ಮಹಿಳೆಯರಿಗಾಗಿ ಪ್ರತ್ಯೇಕ ಆಯುಷ್ಮತಿ ಕ್ಲಿನಿಕ್, ಶೀಘ್ರದಲ್ಲೇ ಆರಂಭ!
ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್ ಗಳ ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ.

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್ ಗಳ ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ.
ಕೆಲ ದಿನಗಳ ಹಿಂದಷ್ಟೇ ನಮ್ಮ ಕ್ಲಿನಿಕ್ ಗಳನ್ನು ತೆರೆಯಲಾಗಿತ್ತು. ಅದೇ ರೀತಿ ಆಯುಷ್ಮತಿ ಕ್ಲಿನಿಕ್ ಗಳ ತೆರೆದು, ತಜ್ಞ ವೈದ್ಯರಿಂದ ಮಹಿಳೆಯರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ.
ಎನ್‌ಎಚ್‌ಎಂನ ನಿರ್ದೇಶಕ ಡಾ.ನವೀನ್ ಭಟ್ ಅವರು ಮಾತನಾಡಿ, ರಾಜ್ಯದಲ್ಲಿ 50 ಕ್ಲಿನಿಕ್‌ಗಳು ಕಾರ್ಯಾಚರಣೆ ಮಾಡಲು ಸಿದ್ಧವಾಗಿವೆ. 128 ಕ್ಲಿನಿಕ್‌ಗಳ ಪೈಕಿ 70 ಕ್ಲಿನಿಕ್ ಗಳನ್ನು ಮಾರ್ಚ್ ಅಂತ್ಯದೊಳಗೆ ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ನಗರ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ (UPHC) ಕ್ಲಿನಿಕ್‌ಗಳನ್ನು ತೆರೆಯಲು ಜುಲೈ 2022 ರಲ್ಲಿ ಯೋಜನೆಯನ್ನು ರೂಪಿಸಲಾಗಿತ್ತು.
ಇದನ್ನೂ ಓದಿ: ಬೆಂಗಳೂರು: ನಗರದಲ್ಲಿ ನಮ್ಮ ಕ್ಲಿನಿಕ್‌ಗಳನ್ನು ತೆರೆದಿದ್ದರೂ, ಹಲವೆಡೆ ಸಿಬ್ಬಂದಿ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳು
ಆರೋಗ್ಯ ಇಲಾಖೆ ಘೋಷಿಸಿರುವಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ 57 ಕ್ಲಿನಿಕ್ ಗಳು ಮತ್ತು ಉಳಿದ ಕ್ಲಿನಿಕ್ ಗಳನ್ನು ರಾಜ್ಯದ ಇತರ ಭಾಗಗಳಲ್ಲಿ ತೆರೆಯಲು ಸಿದ್ಧತೆ ನಡೆಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಪ್ರಸೂತಿ ತಜ್ಞರು ಮತ್ತು ಮಾನಸಿಕ ಆರೋಗ್ಯ ತಜ್ಞರ ಸೇವೆಗಳನ್ನು ರೋಗಿಗಳಿಗೆ ಲಭ್ಯವಾಗುವಂತೆ ಯುಪಿಎಚ್‌ಸಿಗಳಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಡಾ ಭಟ್ ತಿಳಿಸಿದ್ದಾರೆ.
ನಗರದ ಜನರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವೆಗಳನ್ನು ಒದಗಿಸುವುದು ಈ ಚಿಕಿತ್ಸಾಲಯಗಳ ಉದ್ದೇಶವಾಗಿದೆ ಎಂದು ಭಟ್ ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


