ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಹಿಂಡಲಗಾ ಜೈಲಿನಿಂದ ಎರಡನೇ ಬಾರಿ ಬೆದರಿಕೆ ಕರೆ!
ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ, ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ.

ಬೆಳಗಾವಿ: ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ, ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ.
ಎರಡನೇ ಬಾರಿಗೆ ಸಚಿವರ ಕಚೇರಿಗೆ ದೂರವಾಣಿ ಕರೆ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳ ತಂಡ ಹಿಂಡಲಗಾ ಕಾರಾಗೃಹದಲ್ಲಿ ತಪಾಸಣೆ ನಡೆಸಿತು.
ಮೂಲಗಳ ಪ್ರಕಾರ, ಕರೆ ಮಾಡಿದವರು ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಕೋಟ್ಯಂತರ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಗಡ್ಕರಿ ಅವರ ಕಚೇರಿಯಲ್ಲಿ ಕರೆ ಸ್ವೀಕರಿಸುವವರಿಗೆ ಬೆದರಿಕೆ ಹಾಕಿದ್ದಾರೆ.
ಮಂಗಳವಾರ ಗಡ್ಕರಿ ಅವರ ಕಚೇರಿಯಲ್ಲಿ ಫೋನ್ ಕರೆಯನ್ನು ಸ್ವೀಕರಿಸಲಾಗಿದೆ ಮತ್ತು ಕರೆ ಮಾಡಿದವರು ಮೊಬೈಲ್ ಪಾವತಿ ಅಪ್ಲಿಕೇಶನ್ ಗೂಗಲ್ ಪೇ ಮೂಲಕ ಹಣವನ್ನು ಪಾವತಿಸಲು ಬಯಸಿದ್ದರು.
ಇದನ್ನೂ ಓದಿ: ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಹಿಂಡಲಗಾ ಜೈಲಿನಲ್ಲಿ ಪತ್ತೆಯಾಗಿಲ್ಲ ಫೋನ್; ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು!
ಗಡ್ಕರಿಯಿಂದ ಹಣದ ಬೇಡಿಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದಂತೆ ಅನಾಮಧೇಯ ಕರೆ ಮಾಡಿದ ವ್ಯಕ್ತಿ ಎಚ್ಚರಿಕೆ ನೀಡಿದ್ದರು. ಹಿಂಡಲಗಾ ಜೈಲಿನಿಂದ ಕರೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರ ತಂಡ ಶಂಕಿಸಿದ್ದು, ಶುಕ್ರವಾರ ಜೈಲಿನೊಳಗೆ ಮೊಬೈಲ್ ಫೋನ್‌ಗಳನ್ನು ಹುಡುಕಲು ಪ್ರಯತ್ನಿಸಿದ್ದಾರೆ.
ಹಿಂಡಲಗಾ ಜೈಲಿನಲ್ಲಿ ತಪಾಸಣೆ ಮಾಡಲಾಗಿದೆ. ಯಾರ ಬಳಿಯೂ ಮೊಬೈಲ್ ಇಲ್ಲ. ಜಯೇಶ್ ಪೂಜಾರಿಯನ್ನು ಭೇಟಿಯಾಗಲು ಬಂದವರು ಅಥವಾ ಜಾಮೀನು ಮೇಲೆ ಬಿಡುಗಡೆ ಆದವರು ಹೊರಗಿನಿಂದ ಈ ರೀತಿ ಕರೆ ಮಾಡಿರಬಹುದು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


