ರಾಜ್ಯ

ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರು

ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಒಂಬತ್ತು ಪುಟಗಳ ಈ ಪತ್ರವನ್ನು ಕಿರುಕುಳಕ್ಕೆ ಒಳಗಾದ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ಪೊಲೀಸರು ಬರೆದಿದ್ದಾರೆ ಎಂದು ಹೇಳಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ಉಸ್ತುವಾರಿ ಶರಣಗೌಡ ಅವರು ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಣವನ್ನು ಲಪಟಾಯಿಸಿ ತನಗೆ ನೀಡುವಂತೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ರಜೆಗಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ರನ್ನು ಸಂಪರ್ಕಿಸಿದಾಗಲೆಲ್ಲಾ ಅವರು, ಭ್ರಷ್ಟಾಚಾರ ಮತ್ತು ಲಂಚದ ಮೂಲಕ ಹಣವನ್ನು ಲಪಟಾಯಿಸಲು ಸಾಧ್ಯವಾದರೆ ಮಾತ್ರ ಅಂತವರು ರಜೆ ಪಡೆಯಬಹುದು ಎನ್ನುತ್ತಾರೆ. ಯಾರೇ ಹಣ ಕೊಟ್ಟರೂ ಅವರಿಗೆ ರಜೆ ಮತ್ತು ಇತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಬೀಟ್ ಪೊಲೀಸರು ತಮಗೆ ಬೀಟ್ ವಾಹನಗಳನ್ನು (ದ್ವಿಚಕ್ರ ವಾಹನಗಳು) ನೀಡಲು ಅಧಿಕಾರಿಗೆ 5,000 ಲಂಚವನ್ನು ನೀಡಬೇಕಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್ ತಮ್ಮ ಹೆಂಡತಿಯನ್ನು ಠಾಣೆಗೆ ಕರೆತಂದು, ಚೇಂಬರ್‌ನಲ್ಲಿ ಆಕೆಯೊಂದಿಗೆ ಮಾತುಕತೆ ಮಾಡುತ್ತಾರೆ ಎಂದೂ ಆರೋಪಿಸಲಾಗಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ತನ್ನ ಮಕ್ಕಳನ್ನು ಇಲಾಖೆಯ ವಾಹನಗಳಲ್ಲಿ ಈಜುಕೊಳಕ್ಕೆ ಕರೆದೊಯ್ಯುತ್ತಾರೆ. ತನಗೆ ಹಣ ವಸೂಲಿ ಮಾಡದ ಸಿಬ್ಬಂದಿಗೆ ಕಿರುಕುಳ ನೀಡುತ್ತಾರೆ. ಋತುಚಕ್ರದ ಸಮಯದಲ್ಲಿ ರಜೆಗಾಗಿ ಮಹಿಳಾ ಸಿಬ್ಬಂದಿ ಅವರನ್ನು ಸಂಪರ್ಕಿಸಿದಾಗ, ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಹೇಳುತ್ತಾರೆ. ಇನ್ಸ್‌ಪೆಕ್ಟರ್ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಮತ್ತು ಮನೆಗೆ ಆಹ್ವಾನಿಸಿದ್ದಾರೆ. ಮೀಟಿಂಗ್‌ಗಳಲ್ಲಿ, ತನ್ನ ಪೋಸ್ಟಿಂಗ್‌ಗಾಗಿ 25 ಲಕ್ಷ ರೂ.ಗಳನ್ನು ನೀಡಿರುವುದಾಗಿ ಬಹಿರಂಗವಾಗಿ ಘೋಷಿಸುತ್ತಾರೆ ಮತ್ತು ಸಿಬ್ಬಂದಿಯ ತೊಂದರೆಗಳನ್ನು ಕೇಳಲು ಇಲ್ಲಿಗೆ ಬಂದಿಲ್ಲ ಎನ್ನುತ್ತಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕಿರುಕುಳದಿಂದಾಗಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದಿರುವ ಪತ್ರ ವೈರಲ್ ಆಗಿದ್ದು, ಇಲಾಖೆಯಲ್ಲಿನ ಭ್ರಷ್ಟಾಚಾರ ಮತ್ತು ಪೋಸ್ಟಿಂಗ್‌ಗಾಗಿ ಲಂಚದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆಡಳಿತಾರೂಢ ಬಿಜೆಪಿ ಸರ್ಕಾರದತ್ತ ಬೆರಳು ತೋರಿಸಲಾಗುತ್ತಿದೆ.

ಪತ್ರದಲ್ಲಿ ವಿವಿಧ ಬಾರ್‌ಗಳು, ಮಾಲ್‌ಗಳು ಮತ್ತು ಪಬ್‌ಗಳಿಗೆ ನಿಗದಿ ಪಡಿಸಿರುವ ಲಂಚದ ಮೊತ್ತದ ವಿವರಗಳನ್ನು ತಿಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಎಫ್‌ಐಆರ್ ದಾಖಲಿಸಲು 15 ಸಾವಿರ ಹಾಗೂ ಲ್ಯಾಪ್‌ಟಾಪ್ ಕಳ್ಳತನಕ್ಕೆ 5 ಸಾವಿರ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಸುಳ್ಳಿನ ಕಳ್ಳತನ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದ ಯುವಕನ ಆತ್ಮಹತ್ಯೆ ಪ್ರಕರಣದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆತನಿಂದ 3 ಲಕ್ಷ ರೂ.ಗಳಿಗೆ ಬೇಡಿಕೆ ಇಡಲಾಗಿತ್ತು.  ಆತ್ಮಹತ್ಯೆಯ ನಂತರ, ಪ್ರಕರಣವನ್ನು ಮುಚ್ಚಿಹಾಕಲು ಇನ್ಸ್‌ಪೆಕ್ಟರ್ 15 ಲಕ್ಷ ರೂ. ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೀಗಾಗಿ, ಸಾಮೂಹಿಕವಾಗಿ ಬೇರೆ ಠಾಣೆಗೆ ವರ್ಗಾವಣೆ ಮಾಡುವಂತೆ ಸಂತ್ರಸ್ತ ಪೊಲೀಸ್ ಸಿಬ್ಬಂದಿ ರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.