ರಾಜ್ಯ

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
Published On :

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ ಸೋಮವಾರ ಆದೇಶ ನೀಡಿದೆ. ಪರಿಣಾಮವಾಗಿ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಿಸುವಂತಾಗಿದೆ. 

ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.

ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.