ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚಿಕೆ ಆರೋಪ: ಶಾಮನೂರು ಶಿವಶಂಕರಪ್ಪ, ಪುತ್ರ ಮಲ್ಲಿಕಾರ್ಜುನ್ ವಿರುದ್ಧ ಎಫ್ ಐ ಆರ್
ಎಸ್.ಎಸ್ ಮತ್ತು ಎಸ್ ಎಸ್ ಎಂ ಅಭಿಮಾನಿ ಬಳಗದ ಹೆಸರಿನಲ್ಲಿ ಜನರಿಗೆ ಗಿಫ್ಟ್ ಹಂಚುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ಮಾಡಿದ್ದು, ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆಯ ಕೆಟಿಜೆ ನಗರದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ದಾವಣಗೆರೆ: ವಿಧಾನಸಭೆ ಚುನಾವಣಗೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಹೀಗಿದ್ದರೂ ಕೂಡ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಎಸ್.ಎಸ್ ಮತ್ತು ಎಸ್ ಎಸ್ ಎಂ ಅಭಿಮಾನಿ ಬಳಗದ ಹೆಸರಿನಲ್ಲಿ ಜನರಿಗೆ ಗಿಫ್ಟ್ ಹಂಚುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ಮಾಡಿದ್ದು, ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆಯ ಕೆಟಿಜೆ ನಗರದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
7.19 ಲಕ್ಷ ರೂ. ಮೌಲ್ಯದ ದೋಸೆ ಹೆಂಚು ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಜನರಿಗೆ ಆಮಿಷ ತೋರಿಸಿ ಗಿಫ್ಟ್ ಹಂಚುತ್ತಿದ್ದ ಬಗ್ಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಎ1, ಎಸ್.ಎಸ್.ಮಲ್ಲಿಕಾರ್ಜುನ್ ಎ2 ಆರೋಪಿಗಳನ್ನಾಗಿಸಿ ಎಫ್.ಐ.ಆರ್. ದಾಖಲು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


