ದಕ್ಷಿಣ ಕನ್ನಡ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!
ದೈವಾರಾಧನೆ ನಡೆಯುತ್ತಿದ್ದ ಸ್ಥಳದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕಡಬ: ದೈವಾರಾಧನೆ ನಡೆಯುತ್ತಿದ್ದ ಸ್ಥಳದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಮೂಲಂಗೀರಿ ನಿವಾಸಿ ಕಾಂತು ಅಜಿಲ ( ಬಾಬು) ಎಂಬವರೇ ಮೃತಪಟ್ಟ ವ್ಯಕ್ತಿ.
ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಾ.30 ರಂದು ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ನಡೆಯುತ್ತಿದ್ದಾಗಲೇ ಕಾಂತು ಅಜಿಲ ಅವರು ಕುಸಿದು ಬಿದ್ದಿದ್ದಾರೆ. ಕೆಲವೇ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ. ದೈವ ನರ್ತನದ ಸನ್ನಿವೇಶ ಮತ್ತು ನರ್ತಕ ಕುಸಿದು ಬೀಳುವ ದೃಶ್ಯ ಅಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಎರಡು ದೈವಗಳ ನರ್ತನ ಸೇವೆ ಏಕ ಕಾಲದಲ್ಲಿ ನಡೆಯುತ್ತಿತ್ತು. ಭಕ್ತರು ಸುತ್ತಲೂ ಕುಳಿತು ನೋಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಾಂತು ಅಜಿಲ ನರ್ತನ ಸೇವೆಯಲ್ಲಿ ತಲ್ಲೀನರಾಗಿದ್ದಾಗಲೇ ಕುಸಿದು ಬಿದ್ದರು. ತಕ್ಷಣ ನೆರೆದ ಭಕ್ತರು ಧಾವಿಸಿ ಎಬ್ಬಿಸಿದರು.
ಆದರೆ, ಕೆಲವೇ ಹೊತ್ತಿನಲ್ಲಿ ಕಾಂತು ಅಜಿಲ ಮೃತಪಟ್ಟಿದ್ದಾರೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


