ಬೆಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಇಬ್ಬರು ಸವಾರರ ದುರ್ಮರಣ
ಅತಿ ವೇಗವಾಗಿ ಬಂದ ಬೈಕ್ ಒಂದು ಯಲಹಂಕ ಕಾಫಿ ಡೇ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ಅತಿ ವೇಗವಾಗಿ ಬಂದ ಬೈಕ್ ಒಂದು ಯಲಹಂಕ ಕಾಫಿ ಡೇ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಗುದ್ರಾಮ್, ಜುಗ್ ರಾಜ್ ಪ್ರಹಾಪತ್ ಎಂದು ಗುರುತಿಸಲಾಗಿದೆ. ರಾಜಸ್ಥಾನಕ್ಕೆ ತೆರಳಲು ದೇವನಹಳ್ಳಿಯ ವಿಮಾನ ನಿಲ್ದಾಣಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರ ತಲೆ ಡಿವೈಡರ್ ಗೆ ಬಡಿದಿತ್ತು. ಸ್ಥಳದಲ್ಲೇ ಓರ್ವ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಲಹಂಕ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


