ಮಾದರಿ ಸಂಹಿತೆ ಉಲ್ಲಂಘನೆ: ಪರಸ್ಪರರ ವಿರುದ್ಧ ಕಾಂಗ್ರೆಸ್, ಬಿಜೆಪಿ ದೂರು ದಾಖಲು
ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿವೆ.

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿವೆ.
ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಕುಕ್ಕರ್‌ಗಳು ಮತ್ತು ಇತರ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ವರುಣಾದಲ್ಲಿ ನಗದು ಹಂಚಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಸುಮಾರು ಆರು ದಿನಗಳ ಹಿಂದೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ 3.6 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೃಷ್ಣ ಬೈರೇಗೌಡ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರಕ್ಕೆ ತೆರಳಿ ಹಣ ಹಂಚಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಬುಧವಾರ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಎಫ್ಐಆರ್ ದಾಖಲಿಸಲು ಅಧಿಕಾರಿಗಳಿಗೆ ತರಬೇತಿ ನೀಡಿ; ಸರ್ಕಾರಕ್ಕೆ ಹೈಕೋರ್ಟ್
ಈ ನಡುವೆ ಮಂಗಳವಾರ ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಕಲಾವಿದರಿಗೆ ಹಣ ಎಸೆದ ಆರೋಪದ ಮೇಲೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.
ರಾಜ್ಯದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


