ರಾಜ್ಯ

ಸಹಪಾಠಿಯ ಸ್ನಾನದ ವಿಡಿಯೋ; ಕ್ರೀಡಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆ ವಿರುದ್ಧ ಪ್ರಕರಣ

ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಸೌಲಭ್ಯದಲ್ಲಿ ವಾಲಿಬಾಲ್ ತರಬೇತಿಯಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆಯೊಬ್ಬರು, ಸಹಪಾಠಿಯು ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಹಪಾಠಿಯ ಸ್ನಾನದ ವಿಡಿಯೋ; ಕ್ರೀಡಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆ ವಿರುದ್ಧ ಪ್ರಕರಣ
ಪ್ರಾತಿನಿಧಿಕ ಚಿತ್ರ
Published On :

ಬೆಂಗಳೂರು: ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಸೌಲಭ್ಯದಲ್ಲಿ ವಾಲಿಬಾಲ್ ತರಬೇತಿಯಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆಯೊಬ್ಬರು, ಸಹಪಾಠಿಯು ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ವಿಷಯ ಬೆಳಕಿಗೆ ಬಂದ ನಂತರ ಎಸ್‌ಎಐ ಅಧಿಕಾರಿಗಳು ಆರೋಪಿಯನ್ನು ಅಮಾನತುಗೊಳಿಸಿದ್ದಾರೆ.

ಟೇಕ್ವಾಂಡೋ ಕೋಚಿಂಗ್‌ನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಸಂತ್ರಸ್ತೆ, ಮಾರ್ಚ್ 28 ರಂದು ರಾತ್ರಿ ಸ್ನಾನ ಮಾಡುತ್ತಿದ್ದಾಗ ಯಾರೋ ವಿಡಿಯೋ ರೆಕಾರ್ಡ್ ಮಾಡುತ್ತಿದ್ದುದನ್ನು ಗಮನಿಸಿದ್ದಾಗಿ ಎಸ್ಎಐ ಅಧಿಕಾರಿಗಳು ಮತ್ತು ಜ್ಞಾನಭಾರತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕೂಡಲೇ ಹೊರಗೆ ಬಂದು ನೋಡಿದಾಗ, ವಾಲಿಬಾಲ್ ಕೋಚ್ ಆಗಲು ತರಬೇತಿ ಪಡೆಯುತ್ತಿದ್ದ ಮತ್ತೋರ್ವ ಮಹಿಳೆಯೇ ವಿಡಿಯೋ ಮಾಡುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮರುದಿನ ಬೆಳಿಗ್ಗೆ ಆರೋಪಿಯನ್ನು ಅಮಾನತುಗೊಳಿಸಲಾಯಿತು ಎಂದು ಎಸ್‌ಎಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮಹಿಳೆ ವಿರುದ್ಧ ಐಪಿಸಿಯ ಸೆಕ್ಷನ್ 354 ಮತ್ತು 201 (ಸಾಕ್ಷಾಧಾರಗಳನ್ನು ನಾಶಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.