ರಾಜ್ಯ ವಿಧಾನಸಭಾ ಚುನಾವಣೆ 2023: 'ರಾಜ್ಯದ ಜನತೆಯಿಂದಲೇ, ಜನತೆಗಾಗಿ, ಜನತೆಗೋಸ್ಕರ' ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಜೆಪಿ ನಡ್ಡಾ ಅವರು, ರಾಜ್ಯದ 224 ಕ್ಷೇತ್ರದ ಜನತೆ, ತಜ್ಞರ ಅಭಿಪ್ರಾಯ ಪಡೆದು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಬಿಜೆಪಿಯದ್ದು ಜನಪರ ಪ್ರಣಾಳಿಕೆಯಾಗಿದೆ, ಜನರಿಗೆ ಏನೆಲ್ಲಾ ಒಳ್ಳೆಯದನ್ನು ಮಾಡಲು ಸಾಧ್ಯವಿದೆ, ಅದನ್ನು ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಸಚಿವ ಸುಧಾಕರ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


