ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಬೈಕ್ ಸವಾರ ಸಾವು, ಹಿಂಬದಿ ಸವಾರನಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಂಬಿಲ ಎಂಬಲ್ಲಿ ಶುಕ್ರವಾರ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಂಬಿಲ ಎಂಬಲ್ಲಿ ಶುಕ್ರವಾರ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಬಂಟ್ವಾಳ ತಾಲೂಕಿನ ಅಮ್ಟಾಡಿಯ ಸಂದೀಪ್ ಲೋಬೋ (35) ಎಂದು ಗುರುತಿಸಲಾಗಿದೆ. ಆತನ ನೆರೆಮನೆಯ ಆಕಾಶ್‌ಗೆ ಗಂಭೀರ ಗಾಯಗಳಾಗಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂದೀಪ್ ಮತ್ತು ಆಕಾಶ್ ವೆಲ್ಡರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ.
ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


