ಯಾದಗಿರಿ: ಕೆಎಸ್ಆರ್ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮೂವರ ದುರ್ಮರಣ
KSRTC ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ದುರ್ಮರಣ ಹೊಂದಿದ್ದಾರೆ.

ಯಾದಗಿರಿ: KSRTC ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ದುರ್ಮರಣ ಹೊಂದಿದ್ದಾರೆ.
ಯಾದಗಿರಿಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಮೃತರನ್ನು ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ 59 ವರ್ಷದ ನಾಗರಾಜು ಸಜ್ಜನ್, 50 ವರ್ಷದ ಮಹಾದೇವಿ ಹಾಗೂ 45 ವರ್ಷದ ರೇಣುಕಾ ಎಂದು ಗುರುತಿಸಲಾಗಿದೆ.
ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದು ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಚಾಲಕ ಬಸ್ ಅನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


