ರಾಜ್ಯ

ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಪುತ್ರನಿಂದ ಗಾಳಿಯಲ್ಲಿ ಗುಂಡು: ಗೂಂಡಾಗಳಿಗೆ ಟಿಕೆಟ್ ಎಂದು ಕಿಡಿಕಾರಿದ ಕಾಂಗ್ರೆಸ್

ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪುತ್ರ ಸಮರ್ಥ ಗೌಡ ಪಿಸ್ತೂಲ್ ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೊ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. ಬಿಜೆಪಿ ಗೂಂಡಾಗಳಿಗೆ ಟಿಕೆಟ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪ ಮಾಡಿದ್ದಾರೆ.

ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಪುತ್ರನಿಂದ ಗಾಳಿಯಲ್ಲಿ ಗುಂಡು: ಗೂಂಡಾಗಳಿಗೆ ಟಿಕೆಟ್ ಎಂದು ಕಿಡಿಕಾರಿದ ಕಾಂಗ್ರೆಸ್
ತಂದೆಗೆ ಟಿಕೆಟ್ ಸಿಕ್ಕಿದ ಖುಷಿಗೆ ಪಿಸ್ತೂಲ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ವಿಜುಗೌಡ ಪುತ್ರ ಸಮರ್ಥ ಗೌಡ
Published On :

ವಿಜಯಪುರ: ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪುತ್ರ ಸಮರ್ಥ ಗೌಡ ಪಿಸ್ತೂಲ್ ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೊ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. 
ಬಿಜೆಪಿ ಗೂಂಡಾಗಳಿಗೆ ಟಿಕೆಟ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪ ಮಾಡಿದ್ದಾರೆ.

ನಡೆದಿದ್ದೇನು?: ಬಿಜೆಪಿಯಿಂದ ತಮ್ಮ ತಂದೆ ವಿಜುಗೌಡ ಪಾಟೀಲ್ ಗೆ ಟಿಕೆಟ್ ಸಿಕ್ಕಿದ್ದಕ್ಕೆ ಪುತ್ರ ಸಮರ್ಥಗೌಡ ಪಿಸ್ತೂಲ್‌ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ವಿಚಿತ್ರವಾಗಿ ಸಂಭ್ರಮಿಸಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದನ್ನು ಸಂಗಮೇಶ ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದ ಮೇಲೆ ಇವರಿಗೆ ಟಿಕೆಟ್ ಕೊಟ್ಟಿದ್ದೀರಿ ಎಂದು ಬಿಜೆಪಿ ವರಿಷ್ಠರಿಗೆ ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಪ್ರಶ್ನೆ ಮಾಡಿದ್ದಾರೆ. 'ಗೂಂಡಾಗಳಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ ಎಂದು ಬಿಜೆಪಿ ವಿರುದ್ಧ ಸಂಗಮೇಶ ವಾಗ್ದಾಳಿ ಮಾಡಿದ್ದಾರೆ.

ಈ ವಿಡಿಯೊವನ್ನು ವಿಜಯಪುರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಅಲಗೂರು, ಮುಖಂಡ ಸಂಗಮೇಶ ಅವರು ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗೋಷ್ಠಿ ಕರೆದು ಗುಂಡು ಹಾರಿಸಿದ ವಿಡಿಯೋ ತೋರಿಸಿದ್ದಾರೆ. ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಗೂಂಡಾಗಿರಿ ನಡೆಯುತ್ತಿದೆ. ಇಂತಹವರು ಅಭ್ಯರ್ಥಿ ಆಗಿದ್ದಾರೆ. ಬಿಜೆಪಿಯ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಇತರೆ ನಾಯಕರು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.