ಬೆಂಗಳೂರಿನಲ್ಲಿ 2 ದಿನ ಪ್ರಧಾನಿ ಮೋದಿ ರೋಡ್ ಶೋ: 18 ಕ್ಷೇತ್ರಗಳಲ್ಲಿ ಪ್ರಚಾರ, ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮೇ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಲ್ಲಿ ರಾಜಧಾನಿಯ 18 ಕ್ಷೇತ್ರಗಳಲ್ಲಿ 36.6 ಕಿ.ಮೀ. ದೂರ ಬೃಹತ್ ರೋಡ್ ಶೋ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮೇ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಲ್ಲಿ ರಾಜಧಾನಿಯ 18 ಕ್ಷೇತ್ರಗಳಲ್ಲಿ 36.6 ಕಿ.ಮೀ. ದೂರ ಬೃಹತ್ ರೋಡ್ ಶೋ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.
ಆರಂಭದಲ್ಲಿ ಶನಿವಾರ ಒಂದೇ ದಿನ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಆದರೆ, ಜನರಿಗೆ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ 2 ದಿನಗಳಲ್ಲಿ ರೋಡ್ ಶೋ ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಆದರೆ ಇದೀಗ ರೋಡ್ ಶೋನಲ್ಲಿ ಮತ್ತೆ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ.
ಶನಿವಾರ ಬೆಳಗ್ಗೆ 10 ಗಂಟೆಯಿಂದ 12.30 ರವರೆಗೆ ರೋಡ್ ಶೋ ನಡೆಯಲಿದೆ. ಶನಿವಾರ ಜೆ.ಪಿ. ನಗರ ಬ್ರಿಗೇಡ್ ಮಿಲೇನಿಯಂನಿಂದ ಮಲ್ಲೇಶ್ವರಂ ಸರ್ಕಲ್ ಮಾರಮ್ಮ ಟೆಂಪಲ್ ವರೆಗೆ ರೋಡ್ ಶೋ ನಡೆಯಲಿದೆ.
ಇನ್ನು ಭಾನುವಾರ ಬೆಳಗ್ಗೆ 10 ಗಂಟೆಯಿಂದ 11.30 ರವರೆಗೆ ರೋಡ್ ಶೋ ನಡೆಯಲಿದೆ. ಭಾನುವಾರ ಸುರಂಜನ್ ದಾಸ್ ಸರ್ಕಲ್ ನಿಂದ ಟ್ರಿನಿಟಿ ಸರ್ಕಲ್ ವರೆಗೆ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ಜತೆಗೆ ಭಾನುವಾರ ನಡೆಯುವ ರೋಡ್ ಶೋದಲ್ಲಿ 4 ಕಿ.ಮೀ. ಕಡಿತಗೊಳಿಸಲು ನಿರ್ಧಾರ ಮಾಡಲಾಗಿದೆ. ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ನಿರ್ದೇಶನದಂತೆ ರೋಡ್ ಶೋ ಬದಲಾವಣೆ ಮಾಡಿಕೊಳ್ಳಲಾಗಿದೆ.
ಈ ನಡುವೆ ಇಂದು ಸಂಜೆ ಪ್ರಧಾನಿ ಮೋದಿಯವರು ನಗರಕ್ಕೆ ಭೇಟಿ ನೀಡಲಿದ್ದು, 5.30ರಿಂದ ರಾತ್ರಿ 7 ಗಂಟೆ ವರೆಗೆ ಈ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಡ್ಜ್ ಲೇಔಟ್ ರಸ್ತೆ, ಇಂದಿರಾ ನಗರ 100 ಅಡಿ ರಸ್ತೆ, ಅರಳಿ ಕಟ್ಟೆ, ಎ.ಎಸ್.ಸಿ,ಸೆಂಟರ್, ಟ್ರಿನಿಟಿ ವೃತ್ತ, ರಾಜಭವನ ರಸ್ತೆ, ಎಂಜಿ ರಸ್ತೆ, ಡಿಕನ್ಸನ್ ರಸ್ತೆ, ಮಣಿಪಾಲ್ ಸೆಂಟರ್, ಕಬ್ಬನ್ ರಸ್ತೆ, ಬಿಆರ್ವಿ ಜಂಕ್ಷನ್, ಸಿಟಿಓ ಜಂಕ್ಷನ್, ಇನ್ಫೆಂಟ್ರಿ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂದಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಟ್ರಾಫಿಕ್ ಪೊಲೀಸ್ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


