ಪ್ರಧಾನಿ ಮೋದಿ ರ್ಯಾಲಿ ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಕಾಂಗ್ರೆಸ್
ಬಿಜೆಪಿಗೆ ತಕ್ಕ ಪಾಠ ಕಲಿಸಲು ಜನರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರ್ಯಾಲಿಯಿಂದ ದೊಡ್ಡ ವ್ಯತ್ಯಾಸಗಳಾವುದೂ ಆಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಬೆಂಗಳೂರು: ಬಿಜೆಪಿಗೆ ತಕ್ಕ ಪಾಠ ಕಲಿಸಲು ಜನರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರ್ಯಾಲಿಯಿಂದ ದೊಡ್ಡ ವ್ಯತ್ಯಾಸಗಳಾವುದೂ ಆಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಪ್ರಧಾನಿಯವರ ರೋಡ್‌ಶೋ, ದೊಡ್ಡದ ಮಟ್ಟದ ಪ್ರಚಾರ ಸಮಾವೇಶಗಳ ಹೊರತಾಗಿಯೂ, ಹಿಮಾಚಲ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲು ಕಂಡಿದೆ. ತೆಲಂಗಾಣ, ಬಿಹಾರ, ಒಡಿಶಾ, ಪಂಜಾಬ್, ತಮಿಳುನಾಡು ಮತ್ತು ಕೇರಳ ಹಾಗೂ ದೆಹಲಿಯ ಮುನ್ಸಿಪಲ್ ಚುನಾವಣೆಗಳಲ್ಲಿ ಪಕ್ಷವು ಸೋತಿದೆ ಎಂದು ಕಾಂಗ್ರೆಸ್ ನಾಯಕರಾದ ರಾಮಲಿಂಗಾ ರೆಡ್ಡಿ ಹಾಗೂ ಕೆಜೆ.ಜಾರ್ಜ್ ಅವರು ಹೇಳಿದ್ದಾರೆ.
2018 ರಲ್ಲಿ ಮೋದಿ ಬೆಂಗಳೂರಿನಲ್ಲಿ ಪ್ರಚಾರ ಮಾಡಿದರು, ಅಂದು ಬೆಂಗಳೂರಿನಲ್ಲಿ ಕಾಂಗ್ರೆಸ್ 15 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ ಕೇವಲ 11 ಸ್ಥಾನಗಳನ್ನು ಗಳಿಸಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬರುತ್ತಾರೆ, ಹೋಗುತ್ತಾರೆ ಆದರೆ, ಎಂದಿಗೂ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


