ರಾಜ್ಯ

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಅಸುನೀಗಿದೆ.

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ
ಬಲರಾಮ ಆನೆ
Published On :

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಅಸುನೀಗಿದೆ.

67 ವರ್ಷದ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.

Story image

ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು‌ ಕುಡಿಯಲು ಆಗದೇ ತೀವ್ರ ಅಸ್ವಸ್ಥಗೊಂಡಿತ್ತು. ಬಲರಾಮನಿಗೆ ಕ್ಷಯ ಇರಬಹುದೆಂದು ವೈದ್ಯರು ಶಂಕಿಸಿದ್ದರು. ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.