ಕರ್ನಾಟಕ ಚುನಾವಣೆ: ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ.

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ.
ಆಯಾ ಕ್ಷೇತ್ರಗಳ ಮಟ್ಟಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರುಗಳೂ ಸೇರಿದಂತೆ ಎಲ್ಲಾ ಮುಖಂಡರು ಜಾಗ ಖಾಲಿ ಮಾಡಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ ನಾಳೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಯಾವುದೇ ಅಭ್ಯರ್ಥಿ ಧ್ವನಿವರ್ಧಕ ಬಳಸಿ, ಸಮಾವೇಶ, ರೋಡ್ ಶೋಗಳ ಮೂಲಕ ಮತಯಾಚಿಸುವಂತಿಲ್ಲ. ಆದರೆ, ಮನೆ ಮನೆಗೆ ತೆರಳಿ ಮಂಗಳವಾರ ಸಂಜೆಯವರೆಗೂ ಮತ ಕೇಳಬಹುದು.
ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಜೆಡಿಎಸ್ ನ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಇಂದು ಬಿರುಸಿನ ಪ್ರಚಾರ ನಡೆಸುವ ಮೂಲಕ ಕೊನೆ ಘಳಿಗೆಯಲ್ಲಿ ಮತದಾರರನ್ನು ಓಲೈಸುವ ಕಸರತ್ತು ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


