ರಾಮಲಿಂಗಾ ರೆಡ್ಡಿ ಆಪ್ತ ಮಂಜುನಾಥ್ ರೆಡ್ಡಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಸುಳ್ಳು ಎಂದ ಕಾಂಗ್ರೆಸ್
ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಆಪ್ತ ಮಂಜುನಾಥ್ ರೆಡ್ಡಿಯವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಆಪ್ತ ಮಂಜುನಾಥ್ ರೆಡ್ಡಿಯವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.
ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಹರಿನಾಥ್ ಅವರ ಮೇಲೆ ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾ ರೆಡ್ಡಿಯವರು, ಆರೋಪವನ್ನು ನಿರಾಕರಿಸಿತ್ತು, ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ವಿರುದ್ಧ ಸುಳ್ಳು ಪ್ರಕರಣಗಳ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಬಿಟಿಎಂ ಲೇಔಟ್‌ನ 21ನೇ ಕ್ರಾಸ್‌ನಲ್ಲಿ ಹರಿನಾಥ್ ಅವರು ಹಣ ಹಂಚುತ್ತಿದ್ದರು. ಈ ವಿಷಯ ತಿಳಿದ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ತೆರಳಿದ್ದರು. ಕಾರ್ಯಕರ್ತರ ನೋಡುತ್ತಿದ್ದಂತೆಯೇ ಹರಿನಾಥ್ ಓಡಲು ಯತ್ನಿಸಿದರು. ಆದರೆ, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಆದರೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಆದೇಶದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ತಿಳಿಸಿದ್ದಾರೆ.
ನಮ್ಮ ನಾಯಕರ ವಿರುದ್ಧ ದೂರು ದಾಖಲಾದ ಬಳಿಕ, ಪ್ರತಿ ದೂರು ದಾಖಲಿಸಲು ಠಾಣೆಗೆ ಹೋಗಿದ್ದೆವು. ಆದರೆ, ಪೊಲೀಸರು ನಿರ್ಲಕ್ಷಿಸಿದರು ಎಂದು ಆರೋಪಿಸಿದ್ದಾರೆ. ತೇಜಸ್ವಿ ಸೂರ್ಯ ಒತ್ತಡಕ್ಕೆ ಮಣಿದು ನಮ್ಮವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆಂದು ಹೇಳಿದ್ದಾರೆ.
ಇದಕ್ಕೂ ಮುನ್ನ, ಬಿಜೆಪಿ ಕಾರ್ಯಕರ್ತ ರಮೇಶ್ ರೆಡ್ಡಿ ಅವರು, ಮಂಜುನಾಥ್ ರೆಡ್ಡಿ ಮತ್ತು ಅವರ ಮಗ ಲಿತೇಶ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಬೆಂಬಲಿಗರು ಮತ್ತು ಇನ್ನೊಬ್ಬ ವ್ಯಕ್ತಿ ಹರಿನಾಥ್ ಅವರ ನಿವಾಸದಲ್ಲಿ ಹಲ್ಲೆ ನಡೆಸಿದ್ದರು ಎಂದು ಹೇಳಿಕೆ ನೀಡಿದ್ದಾರೆ.
ದಾಳಿಯಿಂದಾಗಿ ಅವರ ಮುಖಕ್ಕೆ ಆರು ಹೊಲಿಗೆ ಹಾಕಲಾಗಿದ್ದು, ದಾಳಿಕೋರರು ಅವರ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದರು ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


