ರಾಜ್ಯ

ಬಜರಂಗದಳ ಬ್ಯಾನ್ ವಿವಾದ ಬೆನ್ನಲ್ಲೇ ಹನುಮನ ದೇವಾಲಯಕ್ಕೆ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಬಜರಂಗದಳ ನಿಷೇಧ ಮಾಡುವ ಭರವಸೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಹಲವು ಹಿಂದೂಪರ ಸಂಘಟನೆಗಳು ಹನುಮಾನ್ ಚಾಲೀಸಾ ಪಠನೆ ಮಾಡುವ ಮೂಲಕ ತಿರುಗೇಟು ನೀಡುತ್ತಿವೆ.

ಬಜರಂಗದಳ ಬ್ಯಾನ್ ವಿವಾದ ಬೆನ್ನಲ್ಲೇ ಹನುಮನ ದೇವಾಲಯಕ್ಕೆ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕೆ.ಆರ್.ಮಾರುಕಟ್ಟೆಯ ಆಂಜನೇಯ ದೇವಸ್ಥಾನದಲ್ಲಿ ಡಿಕೆ.ಶಿವಕುಮಾರ್.
Published On :

ಬೆಂಗಳೂರು: ಬಜರಂಗದಳ ನಿಷೇಧ ಮಾಡುವ ಭರವಸೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಹಲವು ಹಿಂದೂಪರ ಸಂಘಟನೆಗಳು ಹನುಮಾನ್ ಚಾಲೀಸಾ ಪಠನೆ ಮಾಡುವ ಮೂಲಕ ತಿರುಗೇಟು ನೀಡುತ್ತಿವೆ.

ವಿವಾದ ತಾರಕ್ಕೇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಇಂದು ಹನುಮನ ದೇವಾಲಯಕ್ಕೆ ಭೇಟಿ ನೀಡಿದ್ದು, ಬಜರಂಗಬಲಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೆ.ಆರ್.ಮಾರುಕಟ್ಟೆಯಲ್ಲಿರುವ ಆಂಜನೇಯ ದೇವಾಸ್ಥಾನಕ್ಕೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿತ್ತು. ಕಾಂಗ್ರೆಸ್ ಪಕ್ಷ ಈ ಭರವಸೆ ಬಿಜೆಪಿ ನಾಯಕರ ಹಾಗೂ ಹಿಂದು ಸಂಘಟನೆಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ.

ಹೀಗಾಗಿ ಕಾಂಗ್ರೆಸ್ ವಿರುದ್ಧ ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣಕ್ಕೆ ಹಿಂದೂಪರ ಸಂಘಟನೆಗಳು ಕರೆ ನೀಡಲಾಗಿದ್ದು, ಅದರಂತೆ ಕಳೆದ ಗುರುವಾರ(ಮೇ 04)ದಿಂದ ರಾಜ್ಯದ ವಿವಿಧ ದೇವಾಲಯಗಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.