ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ; 58 ಲಕ್ಷ ರೂ. ಜಪ್ತಿ
ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.
ಮತದಾರರಿಗೆ ಹಂಚಲು ಇಟ್ಟಿದ್ದ ಕವರ್‌ಗಳಲ್ಲಿ ನಗದು ಪತ್ತೆಯಾಗಿದೆ. ಕವರ್‌ಗಳಲ್ಲಿ ಸುಮಾರು 50 ಲಕ್ಷ ರೂಪಾಯಿ ನಗದು ಮತ್ತು ಮನೆಯ ಇತರ ಸ್ಥಳಗಳಲ್ಲಿ ಸುಮಾರು 8.83 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ದಾಳಿ ನಡೆಸಿದ್ದ ಅಧಿಕಾರಿಗಳು ಇಂದೂ ಕೂಡಾ ತಪಾಸಣೆ ಮುಂದುವರೆಸಿದ್ದಾರೆ.ವಿಚಕ್ಷಣಾ ದಳದ ಅಧಿಕಾರಿ ರಾಘವೇಂದ್ರ, ಅಬಕಾರಿ ಅಧಿಕಾರಿ ಇಮ್ರಾನ್, ನೋಡೆಲ್ ಅಧಿಕಾರಿ ಮಧುಸೂದನ್ ನೇತೃತ್ವ ದಲ್ಲಿ ದಾಳಿ ನಡೆದಿದೆ.
ಅಲ್ಲದೆ, 239 ಲೀಟರ್ ಬಿಯರ್ ಮತ್ತು 9 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಬುಧವಾರವೂ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮತ್ತೊಂದು ಘಟನೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಾದಿಕ್‌ನಗರದಲ್ಲಿ 1.08 ಲಕ್ಷ ರೂ. ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲೂ ಪೊಲೀಸರು 4.25 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಇದರೊಟ್ಟಿಗೆ ಅಂಚೆ ಮತದಾರರ ಪಟ್ಟಿಯೂ ಲಭ್ಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


