ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಂಗಳೂರಿನಲ್ಲಿ ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ
ವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.

ಮಂಗಳೂರು: ವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.
ರಾಜ್ಯದ ಹಲವೆಡೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ, ಕಲ್ಲು ತೂರಾಟ ನಡೆದಿದೆ. ಈ ನಡುವೆ ನಗರ ಹೊರವಲಯದ ಮೂಡುಶೆಡ್ಡೆ ಬಳಿ ಬುಧವಾರ ರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಮೂಲ್ಕಿ ಮೂಡಬಿದರೆ ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.
ಮಿಥುನ್ ರೈ ಬೂತ್ ಗೆ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆ ಶುರುವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಕೂಡ ಕಲ್ಲು ತೂರಾಟ ನಡೆಸಲಾಗಿದೆ. ಭದ್ರತೆಗಾಗಿ ಸ್ಥಳದಲ್ಲಿ ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


