ರಾಜ್ಯ

ಚಿಕ್ಕಮಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಿ.ಟಿ ರವಿ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿ,ಟಿ ರವಿ ಅವರಿಗೆ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಮಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಿ.ಟಿ ರವಿ ಆಸ್ಪತ್ರೆಗೆ ದಾಖಲು
ಸಿ,ಟಿ ರವಿ
Published On :

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಇತ್ತೀಚೆಗೆ ಕಿಡ್ನಿ ಸಮಸ್ಯೆ ಎದುರಾಗಿದ್ದು, ಶಸ್ತ್ರಕ್ರಿಯೆ ಕೂಡಾ ನಡೆದಿತ್ತು. ಇದೀಗ ಬುಧವಾರ ರಾತ್ರಿ ಆರೋಗ್ಯದಲ್ಲಿ ದಿಢೀರ್‌ ವ್ಯತ್ಯಾಸವಾಗಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಿಧಾನಸಭಾ ಚುನಾವಣೆಯಲ್ಲಿ  ‌ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.