ರಾಜ್ಯ

ಚಿಕ್ಕಮಗಳೂರಿನಲ್ಲಿ ಕಾರು- ಟಿಟಿ ವಾಹನ ನಡುವೆ ಭೀಕರ ಅಪಘಾತ: ಮಗು ಸೇರಿ ಇಬ್ಬರ ದಾರುಣ ಸಾವು

ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಕಾರು- ಟಿಟಿ ವಾಹನ ನಡುವೆ ಭೀಕರ ಅಪಘಾತ: ಮಗು ಸೇರಿ ಇಬ್ಬರ ದಾರುಣ ಸಾವು
ಚಿಕ್ಕಮಗಳೂರಿನಲ್ಲಿ ಅಪಘಾತ
Published On :

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ ನಡೆದಿದೆ.

ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡಿದ್ದಾರೆ.

ಭೀಕರ ಅಪಘಾತವು ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಹೊನ್ನಾವರದಿಂದ  ಸಂಬಂಧಿಕರ ಮದುವೆಗೆ  ಗಿರಿಧರ್ ಕುಟುಂಬ ತೆರಳುತ್ತಿದ್ದರು, ಕೇರಳದಿಂದ ಚಿಕ್ಕಮಗಳೂರಿಗೆ ಟಿ ಟಿ ವಾಹನ ಪ್ರವಾಸಕ್ಕೆ ಬರುತ್ತಿತ್ತು. ಗಂಭೀರ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.