ದಕ್ಷಿಣ ಆಫ್ರಿಕಾದಲ್ಲಿ ಬಳಸಿದ್ದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಬಳಸಿಲ್ಲ: ಆಯೋಗ
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬೀಳಲಿದೆ. ಆದರೆ ಅದಕ್ಕೂ ಮುನ್ನ ಚುನಾವಣಾ ಆಯೋಗ ಇವಿಎಂ ಯಂತ್ರದ ಬಗ್ಗೆ ಕಾಂಗ್ರೆಸ್ ಮಾಡಿದ್ದ ಆರೋಪವನ್ನು ತಿರಸ್ಕರಿಸಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬೀಳಲಿದೆ. ಆದರೆ ಅದಕ್ಕೂ ಮುನ್ನ ಚುನಾವಣಾ ಆಯೋಗ ಇವಿಎಂ ಯಂತ್ರದ ಬಗ್ಗೆ ಕಾಂಗ್ರೆಸ್ ಮಾಡಿದ್ದ ಆರೋಪವನ್ನು ತಿರಸ್ಕರಿಸಿದೆ.
ವಾಸ್ತವವಾಗಿ, ಕರ್ನಾಟಕದಲ್ಲಿ ಮತದಾನಕ್ಕೆ ಚುನಾವಣಾ ಆಯೋಗವು ಬಳಸುತ್ತಿದ್ದ ಇವಿಎಂ ಯಂತ್ರಗಳನ್ನು ಮೊದಲು ದಕ್ಷಿಣ ಆಫ್ರಿಕಾದಲ್ಲಿ ಬಳಸಲಾಗಿತ್ತು ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಾಂಗ್ರೆಸ್‌ನ ಈ ಹೇಳಿಕೆಯನ್ನು ತಿರಸ್ಕರಿಸಿರುವ ಚುನಾವಣಾ ಆಯೋಗವು, ಇಂತಹ ಸುಳ್ಳು ಮಾಹಿತಿಗಳನ್ನು ಹರಡುವ ತನ್ನ ಮೂಲಗಳನ್ನು ಕಾಂಗ್ರೆಸ್ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಹೇಳಿದೆ.
ಚುನಾವಣಾ ಆಯೋಗಕ್ಕೆ ಪತ್ರ ಬರೆದ ಕಾಂಗ್ರೆಸ್
ಮೇ 8ರಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಕಾಂಗ್ರೆಸ್ ಇವಿಎಂ ಯಂತ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಬಳಸಿದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಮರುಮೌಲ್ಯಮಾಪನ ಮತ್ತು ಮರುಪರಿಶೀಲನೆಯ ಪ್ರಕ್ರಿಯೆಗೆ ಒಳಪಡಿಸದೆ ಮರುಬಳಕೆ ಮಾಡಲಾಗುತ್ತಿದೆಯೇ ಎಂದು ಕಾಂಗ್ರೆಸ್ ಪತ್ರದಲ್ಲಿ ವಿವರಣೆ ಕೇಳಿತ್ತು. ಈ ಯಂತ್ರಗಳನ್ನು ಕರ್ನಾಟಕ ಚುನಾವಣೆಯಲ್ಲಿ ಭಾರತೀಯ ಷರತ್ತುಗಳಿಗೆ ಅನುಗುಣವಾಗಿ ಪರಿಶೀಲನೆ ಪ್ರಕ್ರಿಯೆಗೆ ಒಳಪಡಿಸದೆ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಆರೋಪ ಕುರಿತು ಆಯೋಗವು ಕಾಂಗ್ರೆಸ್‌ನಿಂದ ಮಾಹಿತಿ ಕೇಳಿತ್ತು.
ರಣದೀಪ್ ಸುರ್ಜೇವಾಲಾಗೆ ಪತ್ರ ಬರೆದಿದ್ದ ಚುನಾವಣಾ ಆಯೋಗ
ಪಕ್ಷದ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ನ ಆರೋಪವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಕಾಂಗ್ರೆಸ್‌ನ ಆರೋಪಗಳನ್ನು ನಿರಾಕರಿಸಿರುವ ಆಯೋಗ, ಇವಿಎಂಗಳನ್ನು ದಕ್ಷಿಣ ಆಫ್ರಿಕಾಕ್ಕೆ ಕಳುಹಿಸಲಾಗಿಲ್ಲ ಅಥವಾ ಆ ದೇಶವು ಇವಿಎಂಗಳನ್ನು ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕ ಚುನಾವಣೆಯಲ್ಲಿ ಹೊಸ ECIL ತಯಾರಿಸಿದ ಇವಿಎಂಗಳನ್ನು ಮಾತ್ರ ಬಳಸಲಾಗುವುದು ಎಂದು ಗೊತ್ತಿದ್ದೂ ಕಾಂಗ್ರೆಸ್ ಇಂತಹ ತಪ್ಪು ಆರೋಪಗಳನ್ನು ಮಾಡಿದೆ ಎಂದು ಆಯೋಗ ಹೇಳಿದೆ.
ಆರೋಪದ ಮೂಲ ಬಹಿರಂಗಪಡಿಸುವಂತೆ ಕಾಂಗ್ರೆಸ್ ಗೆ ಸವಾಲು
ಇಂತಹ ಗಂಭೀರ ಆರೋಪಗಳನ್ನು ಪಕ್ಷವು ಯಾವ ಆಧಾರದ ಮೇಲೆ ಹರಡಿದೆ ಎಂಬ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕು. ಇದರ ವಿರುದ್ದ ತಾವು ತೆಗೆದುಕೊಂಡ ಕ್ರಮವನ್ನು ತಿಳಿಸಬೇಕು ಎಂದು ಆಯೋಗ ಹೇಳಿದೆ. ಮೇ 15ರಂದು ಸಂಜೆ 5 ಗಂಟೆಯೊಳಗೆ ಕಾಂಗ್ರೆಸ್ ಉತ್ತರಿಸಬೇಕು. ಅಲ್ಲದೆ ತಾವು ತೆಗೆದುಕೊಂಡ ಕ್ರಮವನ್ನು ಖಚಿತಪಡಿಸಬೇಕು ಎಂದು ಆಯೋಗ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


