ಮತದಾನ ಪೂರ್ಣ ಬೆನ್ನಲ್ಲೇ ರಿಲ್ಯಾಕ್ಸ್ ಮೂಡ್'ನಲ್ಲಿ ಹೆಚ್'ಡಿ.ಕುಮಾರಸ್ವಾಮಿ: ಸಿಂಗಾಪುರಕ್ಕೆ ಪ್ರಯಾಣ
ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಯಶಸ್ವಿಯಾಗಿ ಮತದಾನ ನಡೆದಿದ್ದು, ಮೂರು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿದೇಶಕ್ಕೆ ಹಾರಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಯಶಸ್ವಿಯಾಗಿ ಮತದಾನ ನಡೆದಿದ್ದು, ಮೂರು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿದೇಶಕ್ಕೆ ಹಾರಿದ್ದಾರೆಂದು ತಿಳಿದುಬಂದಿದೆ.
ಕುಮಾರಸ್ವಾಮಿಯವರು ಬುಧವಾರ ತಡರಾತ್ರಿ ಆಪ್ತರ ಜೊತೆ ಬೆಂಗಳೂರಿನಿಂದ ಸಿಂಗಾಪೂರಕ್ಕೆ ತೆರಳಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆಂದು ಮೂಲಗಳು ತಿಳಿಸಿವೆ.
ಸಿ ವೋಟರ್ ಸಮೀಕ್ಷೆಯ ಪ್ರಕಾರ ಬಿಜೆಪಿ 83 ರಿಂದ 95 ಸ್ಥಾನ ಗಳಿಸಬಹುದು ಎಂದು ಅಂದಾಜಿಸಲಾಗಿದ್ದು, ಕಾಂಗ್ರೆಸ್ 100 ಸ್ಥಾನದಿಂದ 112 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇನ್ನು ಜೆಡಿಎಸ್ 21 ರಿಂದ 29 ಸ್ಥಾನ ಪಡೆಬಹುದು ಎಂದು ಹೇಳಿದೆ, ಪಕ್ಷೇತರ ಅಭ್ಯರ್ಥಿಗಳು ಇಬ್ಬರಿಂದ 6 ಜನ ಗೆಲ್ಲಬಹುದು ಎಂದು ಅಂದಾಜು ಲೆಕ್ಕ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


