ರಾಜ್ಯ

ಕಾರವಾರ: ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ದುರಂತ, ಮೂವರು ಸಾವು!

ಪಂಪ್‌ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದಲ್ಲಿ ನಡೆದಿದೆ.

ಕಾರವಾರ: ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ದುರಂತ, ಮೂವರು ಸಾವು!
ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.!
Published On :

ಕಾರವಾರ: ಪಂಪ್‌ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದಲ್ಲಿ ನಡೆದಿದೆ. 

ಮೃತರನ್ನು ಶಿರಸಿಯ ದೇವನಿಲಯದ ನಿವಾಸಿ 48 ವರ್ಷದ ಗೋವಿಂದ ಸೋಮಯ್ಯ ಪೂಜಾರಿ, 38 ವರ್ಷದ ಸುರೇಶ್ ನಾಯರ್ ಮತ್ತು 23 ವರ್ಷದ ಗಣೇಶ್ ರಾಮದಾಸ್ ಶೇಟ್ ಎಂದು ಗುರುತಿಸಲಾಗಿದೆ. ಬಾವಿಯಲ್ಲಿ ಬಿದ್ದಿದ್ದ ಪಂಪ್ ಸೆಟ್ ತೆಗೆಯಲು ಹೋಗಿ ಈ ದುರ್ಘಟನೆ ನಡೆದಿದೆ.

ಗೋವಿಂದ ಸೋಮಯ್ಯ ಪೂಜಾರಿ ಪಂಪ್‌ ಸರಿಪಡಿಸುವಾಗ ಆಮ್ಲಜನಕ ಕೊರತೆಯಿಂದಾಗಿ ಬಾವಿಯೊಳಗೆ ಬಿದ್ದಿರುತ್ತಾರೆ. ಅವರನ್ನು ರಕ್ಷಿಸಲು ಮುಂದಾದ ಗಣೇಶ ರಾಮದಾಸ್‌ ಶೇಟ್‌ ಹಾಗೂ ಭರತನಹಳ್ಳಿಯ ಸುರೇಶ ನಾಯರ್‌ ಬಾವಿಯೊಳಗೆ ಇಳಿದಿದ್ದು, ಮೂವರೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಯಲ್ಲಾಪುರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.