ರಾಜ್ಯ

ಪರಮೇಶ್ವರ್'ಗೆ ಮತ ಹಾಕಿದರೂ ಇವಿಎಂ ವಿವಿಪ್ಯಾಟ್ ತೋರಿಸಿದ್ದು ಬಿಎಸ್'ಪಿ ಗುರುತು?

ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮುಂದಿದ ಎಂದು ಭವಿಷ್ಯ ನುಡಿಯಲಾಗಿದ್ದು, ಕಾಂಗ್ರೆಸ್‌ ಪರ ಅಲೆ ಇರುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು, ಇವಿಎಂ ಕಾರ್ಯವೈಖರಿ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

ಪರಮೇಶ್ವರ್'ಗೆ ಮತ ಹಾಕಿದರೂ ಇವಿಎಂ ವಿವಿಪ್ಯಾಟ್ ತೋರಿಸಿದ್ದು ಬಿಎಸ್'ಪಿ ಗುರುತು?
ಪರಮೇಶ್ವರ್
Published On :

ತುಮಕೂರು: ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮುಂದಿದ ಎಂದು ಭವಿಷ್ಯ ನುಡಿಯಲಾಗಿದ್ದು, ಕಾಂಗ್ರೆಸ್‌ ಪರ ಅಲೆ ಇರುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು, ಇವಿಎಂ ಕಾರ್ಯವೈಖರಿ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವಿಎಂ ಮೇಲೆ ಮೊದಲಿನಿಂದಲೂ ಆಕ್ಷೇಪವಿದೆ. ಬ್ಯಾನ್‌ ಮಾಡಿ ಎಂದು ಹೇಳುತ್ತಲೇ ಇದ್ದೇವೆ. ಬಡಕನಹಳ್ಳಿಯ ಕೊರಟಗೆರೆಯ ಮತಗಟ್ಟೆಯೊಂದರಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಬಟನ್ ಒತ್ತಿದರೂ ಇವಿಎಂನ ವಿವಿಪ್ಯಾಟ್ ಬಿಎಸ್‌ಪಿ ಅಭ್ಯರ್ಥಿಗೆ ಮತವನ್ನು ತೋರಿಸಿದೆ. ಬಳಿಕ ಇವಿಎಂನ್ನು ಬದಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ 300 ಜನರು ತಮ್ಮ ಮತ ಹಕ್ಕು ಚಲಾಯಿಸಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆಂಬುದನ್ನು ಕಾದು ನೋಡೋಣ ಎಂದು ಹೇಳಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ತುಮಕೂರು ನಗರ ಮತ್ತು ಶಿರಾ ಹೊರತು ಪಡಿಸಿ, ಉಳಿದ ಕ್ಷೇತ್ರಗಳಲ್ಲಿ ಶೇ.80ಕ್ಕಿಂತಲೂ ಹೆಚ್ಚು ಮತದಾನವಾಗಿದೆ.ನಮಗೆ ಇರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಲಿದೆ. ಇದನ್ನೇ ಸಮೀಕ್ಷೆಗಳು ಹೇಳಿವೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಸಂಪುಟ ಸಭೆಯಲ್ಲಿಯೇ ಪಕ್ಷ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಿದೆ ಎಂದು ಹೇಳಿದರು.

ಮಹಿಳೆಯರು, ಸಾಮಾಜಿಕವಾಗಿ ಹಿಂದುಳಿದ ಜನರು ನಮ್ಮ ಪ್ರಣಾಳಿಕೆಯನ್ನು ನಂಬಿ ಮತ ನೀಡಿದ್ದಾರೆ. ಹಾಗಾಗಿ ನಾವುಗಳು ಸಹ ಜನರ ಅಭಿಪ್ರಾಯಕ್ಕೆ ಬದ್ದತೆಯನ್ನು ತೋರಿಸಬೇಕಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.