ರಾಜ್ಯ

ಶಿಗ್ಗಾಂವಿ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು: ಸಿಎಂ ಎಂಟ್ರಿ ಕೊಡುತ್ತಿದ್ದಂತೆ ಬುಸುಗುಟ್ಟ ನಾಗಪ್ಪ, ಕೆಲಕಾಲ ಆತಂಕ ಸೃಷ್ಟಿ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕಚೇರಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಶಿಗ್ಗಾಂವಿ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು: ಸಿಎಂ ಎಂಟ್ರಿ ಕೊಡುತ್ತಿದ್ದಂತೆ ಬುಸುಗುಟ್ಟ ನಾಗಪ್ಪ, ಕೆಲಕಾಲ ಆತಂಕ ಸೃಷ್ಟಿ!
ಕಚೇರಿ ಬಳಿ ಹಾವು ಕಾಣಿಸಿಕೊಂಡಿರುವುದು.
Published On :

ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕಚೇರಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೊಮ್ಮಾಯಿಯವರು ಬಿಜೆಪಿಗೆ ಕಚೇರಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿಯೇ ಹಾವು ಕಾಣಿಸಿಕೊಂಡಿದೆ. ಈ ವೇಳೆ ಅಲರ್ಟ್ ಆದ ಸಿಬ್ಬಂದಿಗಳು ಮುಖ್ಯಮಂತ್ರಿಗಳು ಮುಂದೆ ಹೋಗದಂತೆ ತಡೆದಿದ್ದಾರೆ. ಬಳಿಕ ಹಾವನ್ನು ರಕ್ಷಣೆ ಮಾಡಿ, ಕಚೇರಿಯಿಂದ ದೂರ ಬಿಟ್ಟಿದ್ದಾರೆ.

ಈ ಬಾರಿಯೂ ಬಿಜೆಪಿ ಸರ್ಕಾರ ರಚಿಸುವ ಇಂಗಿತ ವ್ಯಕ್ತಪಡಿಸಿದ್ದ ಬೊಮ್ಮಾಯಿ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗಳಿಸುವತ್ತ ಹೆಜ್ಜೆ ಇರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.