ಜಯನಗರ ಕ್ಷೇತ್ರದ ಫಲಿತಾಂಶ ಗೊಂದಲ, ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ-ಕಾಂಗ್ರೆಸ್ ನಾಯಕರ ವಾಗ್ವಾದ!
ರಾಜ್ಯ ವಿಧಾನಸಭಾ ಚುನಾವಣೆಯ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ.
ಜಯನಗರದ ಎಸ್ಎಸ್ ಎಂ ಆರ್ ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಬೇರೆಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡರೂ ಮತಗಳನ್ನು ಪರಿಗಣಿಸುವ ವಿಷಯದಲ್ಲಿ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಮರು ಮತ ಎಣಿಕೆ ನಡೆದ ಕಾರಣ ಅಂತಿಮ ಫಲಿತಾಂಶ ಘೋಷಣೆ ವಿಳಂಬವಾಗಿದೆ. ಈ ಮಧ್ಯೆ ಮತ ಕೇಂದ್ರದ ಬಳಿ ಬಿಜೆಪಿ-ಕಾಂಗ್ರೆಸ್ ನಾಯಕರು ಧಾವಿಸಿದ್ದರು. ಈ ಹಂತದಲ್ಲಿ ನಾಯಕರ ನಡುವೆ ವಾಗ್ವಾದ ಉಂಟಾಗಿದೆ.
ಮತ ಎಣಿಕೆ ಕೇಂದ್ರದ ಬಳಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ, ತಿರಸ್ಕೃತಗೊಂಡ ಮತಗಳನ್ನು ಮರು ಎಣಿಕೆ ವೇಳೆ ಪರಿಗಣಿಸಲಾಗಿದೆ, ಅಧಿಕಾರಿಗಳ ಸಹಿ ಇಲ್ಲದ ಮತ ಪರಿಗಣಿಸಲಾಗಿದೆ. ಹೀಗಾಗಿ ಸೌಮ್ಯ ರೆಡ್ಡಿ ಸೋಲು ಎನ್ನುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಆರ್ ಅಶೋಕ್ ಮಾತನಾಡಿದ್ದು, ದಿನೇಶ್ ಗುಂಡೂರಾವ್ ಅವರ ಕ್ಷೇತ್ರದಲ್ಲಿ ನಾವು 150 ಮತಗಳ ಅಂತರದಿಂದ ಸೋತಿದ್ದೇವೆ ಅಲ್ಲಿ ನಾವೇನೂ ಗೂಂಡಾಗಿರಿ ಮಾಡಿ ಫಲಿತಾಂಶ ಘೋಷಿಸುವಂತೆ ಒತ್ತಾಯ ಮಾಡಿಲ್ಲ. ಆದರೆ ಜಯನಗರದಲ್ಲಿ ಮರು ಮತ ಎಣಿಕೆಗೆ ಮನವಿ ಮಾಡಿದ್ದೇವೆ ಆದರೆ ಕಾಂಗ್ರೆಸ್ ನವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಧಿಕಾರಿಗಳು ಮರು ಮತ ಎಣಿಕೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ. ಯಾವ ಮತಗಳನ್ನು ತಿರಸ್ಕರಿಸಬೇಕೆಂದು ಅಧಿಕಾರಿಗಳು ನಿರ್ಧರಿಸಿ ನಿಯಮದಂತೆ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


