ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023: ಎಲ್ಲ 224 ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭ
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023 ಪ್ರಕಟಣೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಮತಎಣಿಕೆ ಕಾರ್ಯ ಆರಂಭವಾಗಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023 ಪ್ರಕಟಣೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಮತಎಣಿಕೆ ಕಾರ್ಯ ಆರಂಭವಾಗಿದೆ.
ವಿಜಯನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಭಾರಿ ಭದ್ರತೆ ನಡುವೆ ನಗರದ ಪ್ರೌಢದೇವರಾಯ ತಾಂತ್ರಿಕ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ್ ಟಿ., ಚುನಾವಣಾ ವೀಕ್ಷಕ ಎಂ.ಎಂ. ನಾಯಕ, ಚುನಾವಣಾಧಿಕಾರಿ ಸಿದ್ಧ ರಾಮೇಶ್ವರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂಗಳ ಸೀಲ್ ತೆಗೆಯಲಾಗಿದ್ದು, ಅಂಚೆ ಮತ ಪತ್ರಗಳನ್ನು ಜೋಡಿಸುವ ಕೆಲಸ ಪ್ರಗತಿಯಲ್ಲಿದ್ದು, ಮತ ಎಣಿಕೆ ಆರಂಭವಾಗಲಿದೆ.
ಇತ್ತ ದಕ್ಷಿಣ ಕನ್ನಡಜಿಲ್ಲೆಯ ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿಕೆ) ಆವರಣದಲ್ಲಿ ಮತಯಂತ್ರಗಳನ್ನು ಇರಿಸಿದ್ದ ಭದ್ರತಾ ಕೊಠಡಿಗಳನ್ನು ಬೆಳಿಗ್ಗೆ 7.40 ಕ್ಕೆ ತೆರೆಯಲಾಗಿದ್ದು, ಮತ ಎಣಿಕೆಕಾರ್ಯ ಆರಂಭವಾಗಿದೆ. ಈಗಾಗಲೇ ಮತ ಎಣಿಕೆ ಕೇಂದ್ರದ ಬಳಿ ಅಭ್ಯರ್ಥಿ ಗಳ ಏಜೆಂಟರು, ಮತ ಎಣಿಕೆ ಅಧಿಕಾರಿಗಳು ಆಗಮಿಸಿದ್ದು, ತುಂತುರು ಮಳೆ ನಡುವೆಯೇ ಮತಎಣಿಕೆ ಕಾರ್ಯ ಶುರುವಾಗಿದೆ.
ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಏಣಿಕೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ನಗರದ ವೈ ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಏಣಿಕೆ ಆರಂಭವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


