ಮೈಸೂರು: ಪ್ರಧಾನಿ ರೋಡ್ ಶೋ ಮಾಡಿದ್ದ ರಸ್ತೆಗಳಲ್ಲಿ ಗೋ ಮೂತ್ರ, ನೀರು ಹಾಕಿ ಸ್ವಚ್ಛಗೊಳಿಸಿದ ಸಿದ್ದರಾಮಯ್ಯ ಅಭಿಮಾನಿ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೋಡ್ ಶೋ ನಡೆಸಿದ್ದರು. ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಕಂಸಾಳೆ ರವಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಘಟನೆ ಇಂದು ಭಾನುವಾರ ನಡೆದಿದೆ.

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೋಡ್ ಶೋ ನಡೆಸಿದ್ದರು. ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಕಂಸಾಳೆ ರವಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಘಟನೆ ಇಂದು ಭಾನುವಾರ ನಡೆದಿದೆ.
ಮೋದಿ ರೋಡ್ ಶೋ ಮಾಡಿದ್ದ ಮೈಸೂರಿನ ಸಯ್ಯಾಜಿ ರಸ್ತೆಗೆ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಗೋ ಮೂತ್ರ, ನೀರು ಹಾಕಿ ಸ್ವಚ್ಛ ಮಾಡಿದ್ದಾರೆ. ಚುನಾವಣೆ ಮೊದಲು ಮೈಸೂರಿನ ರಾಜಮಾರ್ಗದಲ್ಲಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆಗೆ ಮೈಸೂರು ಕಾಂಗ್ರೆಸ್ ಮುಖಂಡರು ಸಗಣಿ ನೀರು ಹಾಕಿ ಸ್ವಚ್ಛಗೊಳಿಸುವ ಮೂಲಕ ಬಿಜೆಪಿಯನ್ನು ವ್ಯಂಗ್ಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ ಕಂಸಾಳೆ ರವಿ, ಚುನಾವಣೆಗೂ ಮುನ್ನ ಮೈಸೂರಿನ ರಾಜ ಮಾರ್ಗದಲ್ಲಿ ಭರ್ಜರಿ ರೋಡ್ ಶೋ ಮೋದಿ ನಡೆಸಿದ್ದರು. ಅಂಬಾರಿ ಹಾದು ಹೋಗುವ ರಾಜ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೆ ದೊಡ್ಡ ತಪ್ಪು. ಇದು ರಾಜ ಮನೆತನಕ್ಕೆ ಮಾಡಿದ ಅಪಮಾನ.
ಅಂಬಾರಿ ಬಿಟ್ಟರೆ ಇನ್ಯಾವುದೇ ದೊಡ್ಡ ಮೆರವಣಿಗೆ ಇಲ್ಲಿ ಮಾಡಿರಲಿಲ್ಲ. ಆದರೆ ಹಿಂದುತ್ವದ ಹೆಸರೇಳುವ ಬಿಜೆಪಿಯವರು ನಾಡಹಬ್ಬಕ್ಕೆ ಅಪಮಾನ ಆಗುವ ಹಾಗೇ ರೋಡ್ ಶೋ ಮಾಡಿದ್ದಾರೆ. ಹಾಗಾಗಿ ಮೈಸೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಿದೆ. ಈ ರಸ್ತೆಗೆ ಆಗಿರುವ ಕೊಳೆಯನ್ನು ತೊಳೆಯಲು ಸಗಣಿ ನೀರು ಹಾಕಿ ಸ್ವಚ್ಛ ಮಾಡುತ್ತಿದ್ದೇವೆ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


