ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.

ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.
ಶ್ರೀರಾಮುಲು ಅವರೇ ಸಾಂತ್ವನ ಹೇಳಿ ಅವರನ್ನು ಕಳುಹಿಸುತ್ತಿದ್ದಾರೆ. ಬಳ್ಳಾರಿಯ ಗ್ರಾಮೀಣ ಭಾಗದಲ್ಲಿ ಹಳ್ಳಿಗಳಲ್ಲಿ ಅಭಿಮಾನಿಗಳು ಕಣ್ಣೀರು ಹರಿಸುತ್ತಿದ್ದಾರೆ. ಸೋಲಿನ ಬಳಿಕ ಹಳ್ಳಿಗಳಲ್ಲಿ ಸಂಚಾರ ಮಾಡಿ ಸೋಲಿನ ಪರಾಮರ್ಶೆ ಮಾಡುತ್ತಿರುವ ಶ್ರೀರಾಮುಲು ಫಲಿತಾಂಶ ಪ್ರಕಟವಾದ ದಿನವೇ ಬಳ್ಳಾರಿ ತಾಲೂಕಿನ ಮೋಕಾಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಬೆಂಬಲಿಗನೊಬ್ಬ ಶ್ರೀರಾಮುಲು ಅವರ ಕಾಲಿಗೆರಗಿ ಕಣ್ಣೀರು ಹಾಕಿದಾಗ ಸುತ್ತ ಕುಳಿತಿದ್ದವರಲ್ಲಿ ಹೆಪ್ಪುಗಟ್ಟಿದ ದುಃಖ ಕಣ್ಣೀರಾಯಿತು.
ಇದನ್ನೂ ಓದಿ: ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲು
ಬೆಂಬಲಿಗರನ್ನು ಕಂಡು ಭಾವೋದ್ವೇಗಕ್ಕೆ ಒಳಗಾದ ಶ್ರೀರಾಮುಲು ಅವರೂ ಕಣ್ಣೀರು ಹಾಕಿದರು. ಈ ಸಂದರ್ಭದಲ್ಲಿ ತೆಗೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಿ 30,000 ಮತಗಳ ಅಂತರದಿಂದ ಶಾಸಕ ನಾಗೇಂದ್ರ ವಿರುದ್ಧ ಶ್ರೀರಾಮುಲು ಸೋಲು ಕಂಡಿದ್ದಾರೆ.
1999ರಲ್ಲಿ ರಾಜಕೀಯ ಜೀವನಕ್ಕೆ ಬಂದಿರುವ ಶ್ರೀರಾಮುಲು ಮೊದಲ ಬಾರಿ ಸೋತಿದ್ದರು, 2004 ರಿಂದ ಈವರೆಗೆ ಸೋತಿರಲಿಲ್ಲ. 2004 ಬಳ್ಳಾರಿ ನಗರ, 2008, 2011ರ ಉಪಚುನಾವಣೆ 2013 ಚುನಾವಣೆಯಲ್ಲಿ ಬಳ್ಳಾರಿ ಗ್ರಾಮಾಂತರದಲ್ಲಿ ಗೆದ್ದಿದ್ದರು. 2014ರಲ್ಲಿ ಕ್ಷೇತ್ರ ಬಿಟ್ಟು ಎಂಪಿಯಾಗಿದ್ದ ಶ್ರೀರಾಮುಲು 2018 ರಲ್ಲಿ ಮೊಳಕಾಲ್ಮೂರಿನಿಂದ ಗೆದ್ದು ಇದೀಗ ಸ್ವಕ್ಷೇತ್ರದಲ್ಲಿ ಸೋತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


