ಬಸ್ಸಿನಲ್ಲಿ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಲೇಡಿ ಕಂಡಕ್ಟರ್
ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕ ವಾಹನ ಸಂಖ್ಯೆ ಕೆ.ಎ-18,ಎಫ್-0865ರಲ್ಲಿ ಬೆಂಗಳೂರು- ಚಿಕ್ಕಮಗಳೂರು ಮಾರ್ಗ ಮಧ್ಯೆ ಕಾರ್ಯಾಚರಣೆಯ ವೇಳೆ, ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ, ನಿನ್ನೆ ಮಧ್ಯಾಹ್ನ 1.25ರ ವೇಳೆ ನಿಗಮದ ವಾಹನ ಸಂಚರಿಸುತ್ತಿತ್ತು. ಬಸ್ಸಿನಲ್ಲಿ ಒಟ್ಟು 45 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಓರ್ವ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಸ್ ಸಾಗುವ ಮಾರ್ಗದಲ್ಲಿ ಹತ್ತಾರು ಕಿಲೋಮೀಟರ್ ದೂರದಲ್ಲಿ ಯಾವುದೇ ಆಸ್ಪತ್ರೆಗಳು ಇರಲಿಲ್ಲ. ಹೀಗಾಗಿ ಬಸ್ಸಿನಲ್ಲಿದ್ದ ಮಹಿಳಾ ಕಂಡಕ್ಟರ್ ವಾಹನವನ್ನು ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.
ಎಸ್ ವಸಂತಮ್ಮ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್ ಆಗಿದ್ದಾರೆ. ಚಾಲಕ-ಕಂ-ನಿರ್ವಾಹಕಿ ಬಿಲ್ಲೆ ಸಂಖ್ಯೆ 245 ಇವರು ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿದ್ದಾರೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆರೋಗ್ಯವಾಗಿದ್ದಾರೆ. ಗರ್ಭಿಣಿಯ ಕುಟುಂಬ ಸದಸ್ಯರು ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ ಯಾವುದೇ ಖಾಸಗಿ ಕಾರು ಅಥವಾ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಹೋಗಲಾಗದೇ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಂಚಾರ ಮಾಡುತ್ತಿದ್ದರು.
ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರದ ಹಿನ್ನೆಲೆಯಲ್ಲಿ ತಕ್ಷಣದ ಖರ್ಚಿಗೆ ಅನುಕೂಲ ಆಗಲೆಂದು ಬಸ್‌ನ ಡ್ರೈವರ್ ಹಾಗೂ ಕಂಡಕ್ಟರ್ ಸೇರಿಕೊಂಡು ಪ್ರಯಾಣಿಕರ ಬಳಿ ಹಣ ಸಂಗ್ರಹಿಸಿ ಮಹಿಳೆಗೆ 1,500 ರೂಪಾಯಿ ಹಣವನ್ನು ಕೊಟ್ಟು ಕಳುಹಿಸಿದ್ದಾರೆ. ನಂತರ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಗೆ ಪಡೆಯಲು ಅನುಕೂಲ ಮಾಡಿದ್ದಾರೆ. ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


