ರಾಜ್ಯ

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕು: ಓಲಾ-ಉಬರ್ ಚಾಲಕರ ಸಂಘ ಒತ್ತಾಯ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಓಲಾ ಮತ್ತು ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಸೋಮವಾರ ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕು: ಓಲಾ-ಉಬರ್ ಚಾಲಕರ ಸಂಘ ಒತ್ತಾಯ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಓಲಾ ಮತ್ತು ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಸೋಮವಾರ ಆಗ್ರಹಿಸಿದ್ದಾರೆ.

ಈ ಸಂಬಂಧ ಎಐಸಿಸಿ ಮಾಜಿ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಬಹಳ ದಿನಗಳಿಂದ ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಹಿಂದಿನ ಸರಕಾರ ಹಲವು ಭರವಸೆಗಳನ್ನು ನೀಡಿದ್ದರೂ ಯಾವುದೇ ಸಕಾರಾತ್ಮಕ ಫಲಿತಾಂಶ ಬಂದಿಲ್ಲ. ಆದರೆ, ಶಿವಕುಮಾರ್ ಸ್ವಯಂಪ್ರೇರಣೆಯಿಂದ ಸಂಘವನ್ನು ಸಂಪರ್ಕಿಸಿ ಚಾಲಕರನ್ನು ಬೆಂಬಲಿಸಿದರು. ಚಾಲಕರೊಂದಿಗೆ ಹಲವು ಬಾರಿ ಸಭೆ ನಡೆಸಿ ಪರಿಹಾರದ ಭರವಸೆ ನೀಡಿದರು. ಡಿಕೆ ಶಿವಕುಮಾರ್ ಅವರ ಸೂಚನೆ ಮೇರೆಗೆ ನಾವು ಏನನ್ನೂ ನಿರೀಕ್ಷಿಸದೆ ಪಕ್ಷಕ್ಕಾಗಿ ದುಡಿದಿದ್ದೇವೆ. ಇದೀಗ ಡಿಕೆಶಿ ಅವರು ಸಿಎಂ ಆಗುವುದನ್ನು ನಿರೀಕ್ಷಿಸುತ್ತಿದ್ದೇವೆಂದು ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.