ಮಾಲೂರು ಕ್ಷೇತ್ರದ ಮತಎಣಿಕೆಯಲ್ಲಿ ಗೊಂದಲ: ಹೈಕೋರ್ಟ್ ಮೊರೆ ಹೋದ ಬಿಜೆಪಿ ಅಭ್ಯರ್ಥಿ
ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಹೈಕೋರ್ಟ್'ನಲ್ಲಿ ಮೆಟ್ಟಿಲೇರಿದ್ದಾರೆ.

ಕೋಲಾರ: ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಹೈಕೋರ್ಟ್'ನಲ್ಲಿ ಮೆಟ್ಟಿಲೇರಿದ್ದಾರೆ.
248 ಮತಗಳ ಅಂತರದಿಂದ ಕಾಂಗ್ರೆಸ್ನ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆ ಮರುಎಣಿಕೆಗೆ ನಿರ್ದೇಶನ ನೀಡುವಂತೆ ಕೋರಿ ಮಂಜುನಾಥಗೌಡ ಮನವಿ ಮಾಡಿದ್ದಾರೆ.
ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಒಂದು ರೀತಿಯಾದರೆ ಮಾಲೂರು ಕ್ಷೇತ್ರದ ಮತಎಣಿಕೆ ಮಾತ್ರ ಇಡೀ ಜಿಲ್ಲೆಯ ಹಾಗೂ ರಾಜ್ಯದ ಜನರಿಗೆ ಕುತೂಹಲಕ್ಕೆ ಕಾರಣವಾಗಿತ್ತು. ಕಾರಣ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ನಂತರ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ನಂತರ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ ಒಬ್ಬರಾದ ಮೇಲೆ ಒಬ್ಬರು ಮುನ್ನಡೆ ಸಾಧಿಸಿಕೊಂಡು ಬಂದಿದ್ದರು. ಆದರೆ, ಒಂದು ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ 1500 ದಿಂದ 2000 ಮತಗಳ ಅಂತರದಲ್ಲಿ ಸುಮಾರು ಏಳೆಂಟು ಸುತ್ತು ಮುನ್ನಡೆ ಸಾಧಿಸಿದ್ದರು.
ಕೊನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿತ್ತು. ಆದರೆ, ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆಗೆ ಆಗ್ರಹಿಸಿದ್ದರು.
ಈ ವೇಳೆ ಮರುಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್ನ ಮೊರೆ ಹೋಗುವುದಾಗಿ ಹೇಳಿದ್ದರು. ಅದರಂತೆಯೇ ಈಗ ಮಂಜುನಾಥಗೌಡ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


