ಮಂಡ್ಯ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.

ಮಂಡ್ಯ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಅಪರಿಚಿತ ಮಹಿಳೆ ಪ್ಲಾಟ್‌ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು. ರೈಲು ನಿಲ್ದಾಣದಲ್ಲಿದ್ದವರು ಕೂಗಿ ಮಹಿಳೆಯನ್ನು ಎಚ್ಚರಿಸಲು ಪ್ರಯತ್ನಿಸಿದರೂ ವೇಗವಾಗಿ ಬಂದ ರೈಲು ಆಕೆಯ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹಿಳೆಯ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಸಂಬಂಧ ಮೈಸೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


