ಬಿಬಿಎಂಪಿ ಅರಣ್ಯ ಘಟಕದಿಂದ ಸಾರ್ವಜನಿಕರಿಗೆ ಉಚಿತವಾಗಿ ಸಸಿಗಳ ವಿತರಣೆ
ಬಿಬಿಎಂಪಿ ಅರಣ್ಯ ಘಟಕದಿಂದ ಸಾರ್ವಜನಿಕರು, ಸ್ವಯಂ ಸೇವಾ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುತ್ತಿದೆ.

ಬೆಂಗಳೂರು: ಬಿಬಿಎಂಪಿ ಅರಣ್ಯ ಘಟಕದಿಂದ ಸಾರ್ವಜನಿಕರು, ಸ್ವಯಂ ಸೇವಾ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುತ್ತಿದೆ.
ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಬೆಂಗಳೂರು ನಗರವನ್ನು ಹಸಿರೀಕರಣ ಮಾಡಲು ವಿವಿಧ ವಲಯಗಳ ವ್ಯಾಪ್ತಿಯ ಸಸ್ಯ ಕ್ಷೇತ್ರಗಳಲ್ಲಿ "8*12" ಅಳತೆಯ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, ಅವುಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.
ಬೊಮ್ಮನಹಳ್ಳಿ, ಯಲಹಂಕ, ರಾಜರಾಜೇಶ್ವರಿ ನಗರ ಹಾಗೂ ಮಹದೇವಪುರ ವಲಯಗಳಲ್ಲಿ ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ವಿತರಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತರು ಅಧಿಕಾರಿಗಳಿಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


